Friday, December 9, 2022

Latest Posts

ಗ್ರೂಪ್ ಸಿ ಹುದ್ದೆ ನೀಡಿದ್ದಕ್ಕೆ ಪಕ್ಷ, ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಪ್ರವೀಣ್​ ಪತ್ನಿ ನೂತನ

ಹೊಸ ದಿಗಂತ ಡಿಜಿಟಲ್ ಡೆಸ್ಕ್ :

ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರು ಗ್ರೂಪ್ ಸಿ ಹುದ್ದೆ ನೀಡಿದ್ದಕ್ಕೆ ಪಕ್ಷ ಮತ್ತು ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ. ಅವರು ಇಂದು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಉಪಸ್ಥಿತಿಯಲ್ಲಿ ಅಧಿಕೃತ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದರು.

ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಅದರಂಂತೆ ಸೆಪ್ಟೆಂಬರ್ ಅಂತ್ಯದಲ್ಲಿ ಸರ್ಕಾರವು ಗುತ್ತಿಗೆ ಆಧಾರದಲ್ಲಿ ನೂತನ ಅವರನ್ನು ನೇಮಕಾತಿ ಮಾಡಿ ಆದೇಶ ಹೊರಡಿಸಿತ್ತು. ಅದರಂತೆ ಉದ್ಯೋಗಕ್ಕೆ ಹಾಜರಾಗಿರುವ ನೂತನ ಕುಮಾರಿ ಅವಕಾಶಕ್ಕಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!