spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಕೊರೋನಾ ಕೇಸ್: ಒಂದೇ ಅಪಾರ್ಟ್ ಮೆಂಟ್ ನ 72ಕ್ಕೂ ಹೆಚ್ಚು ಮನೆಗಳು ಸೀಲ್ ಡೌನ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ 3ನೇ ಅಲೆ ಆರಂಭವಾಗಿರುವ ಆತಂಕ ಶುರುವಾಗಿದೆ. ಅಪಾರ್ಟ್ ಮೆಂಟ್ ನಿವಾಸಿಗಳಲ್ಲಿ ಸೋಂಕು ಹೆಚ್ಚುತ್ತಿದ್ದು, ಮನೆಗಳನ್ನು ಸೀಲ್ ಡೌನ್ ಮಾಡಲಾಗುತ್ತಿದೆ.
ಯಶವಂತಪುರದ ಬೆಲ್ ಅಪಾರ್ಟ್ ಮೆಂಟ್ ನಲ್ಲಿ 16 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಅಪಾರ್ಟ್ ಮೆಂಟ್ ನ ಎ ಬ್ಲಾಕ್ ನಲ್ಲಿರುವ 72 ಮನೆಗಳನ್ನು ಸೀಲ್ ಡೌನ್ ಮಾಡಲಾಗಿದ್ದು, 300ಕ್ಕೂ ಹೆಚ್ಚು ಜನರನ್ನು ಹೋಂ ಐಸೋಲೇಷನ್ ಮಾಡಲಾಗಿದೆ.
ಯಲಹಂಕದ ಸುರಭಿ ಲೆಔಟ್ ನಲ್ಲಿರುವ ಅಪಾರ್ಟ್ ಮೆಂಟ್ ಒಂದರಲ್ಲಿ ಒಂದೇ ಮನೆಯ ಐವರಲ್ಲಿ ಕೋವಿಡ್ ದೃಢಪಟ್ಟಿದ್ದು, ಇಡೀ ಅಪಾರ್ಟ್ ಮೆಂಟ್ ಸೀಲ್ ಡೌನ್ ಮಾಡಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ತಿಳಿಸಿದ್ದಾರೆ.
ಧಾರವಾಡ ಹಾಗೂ ದೆಹಲಿಯಿಂದ ಬಂದವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಂದು ಮನೆಯಲ್ಲಿ ಮೂವರಲ್ಲಿ ಪಾಸಿಟಿವ್ ಬಂದರೆ ಮನೆಯನ್ನು ಸೀಲ್ ಡೌನ್ ಮಾಡಲಾಗುತ್ತಿದ್ದು, ಏರಿಯಾದಲ್ಲಿ ಜನರು ಓಡಾಟ ನಡೆಸದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈಗಲೇ ಮುಂಜಾಗೃತಾ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss