15 ದಿನದೊಳಗೆ ಯಜಮಾನಿಯ ಖಾತೆಗೆ ಬರಲಿದೆ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಹೊಸದಿಗಂತ ಡಿಜಿಟ್ ಡೆಸ್ಕ್:‌

ಕಾಂಗ್ರೆಸ್‌ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ʼಗೃಹಲಕ್ಷ್ಮಿʼ ಯೋಜನೆಯ ಹಣವು ಇನ್ನೂ ಯಜಮಾನಿಯರ ಕೈ ತಲುಪಿಲ್ಲ. 15 ದಿನದೊಳಗೆ ಯಜಮಾನಿಯರ​​ ಖಾತೆಗೆ ಗೃಹಲಕ್ಷ್ಮೀ ಹಣ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

ತಾಂತ್ರಿಕ ಸಮಸ್ಯೆಯಿಂದಾಗಿ ಮಹಿಳೆಯರ ಖಾತೆಗೆ ಹಣ ಹೋಗಿಲ್ಲ. ಇಂದು ತಾಂತ್ರಿಕ ಸಮಸ್ಯೆಗಳ ಕುರಿತು ಮಾಹಿತಿ ಪಡೆದಿದ್ದೇನೆ. 15 ದಿನದೊಳಗೆ ಹಣ ವರ್ಗಾವಣೆ ಮಾಡುವುದಾಗಿ ಹಣಕಾಸು ಇಲಾಖೆ ಭರವಸೆ ನೀಡಿದೆ ಎಂದು ಸಚಿವೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!