October 14, 2026
Wednesday, October 14, 2026
spot_img

ಮಹಿಳೆಯರಿಗೆ ಗುಡ್ ನ್ಯೂಸ್ : ಮುಂದಿನ 4-5 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಜಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಗೃಹಲಕ್ಷ್ಮಿ ಯೋಜನೆಯ ಮಾರ್ಚ್ ತಿಂಗಳ ಬಾಕಿ ಹಣವನ್ನು ಮುಂದಿನ ನಾಲ್ಕರಿಂದ ಐದು ದಿನಗಳಲ್ಲಿ ಹಾಗೂ ಏಪ್ರಿಲ್ ತಿಂಗಳ ಹಣವನ್ನು ಎಂಟು ರಿಂದ ಹತ್ತು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಕನೂರು ಗ್ರಾಮದಲ್ಲಿ ಸೋಮವಾರ ನಡೆದ ಶ್ರೀ ಮಹಾಲಕ್ಷ್ಮಿ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಯಾರ ಹೆಸರನ್ನೂ ಪ್ರಸ್ತಾಪಿಸದೆ, ಕ್ಷೇತ್ರದ ಹಿಂದಿನ ಜನಪ್ರತಿನಿಧಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ಅವರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡದೆ ಕೇವಲ ಹಿಂದುತ್ವ ರಾಜಕಾರಣದ ಮೇಲೆ ಮಾತ್ರ ಗಮನ ಹರಿಸಿದ್ದರು ಎಂದು ಆರೋಪಿಸಿದ್ದಾರೆ.

ಎಲ್ಲಾ ಕ್ಷೇತ್ರಗಳಲ್ಲೂ ಉನ್ನತ ಮಟ್ಟದ ಅಭಿವೃದ್ಧಿಯನ್ನು ಖಾತ್ರಿಪಡಿಸುವ ಮೂಲಕ ತಮ್ಮ ಕ್ಷೇತ್ರವನ್ನು ಬಾರಾಮತಿ ಮಾದರಿಯಲ್ಲಿ ಮಾದರಿ ಪ್ರದೇಶವನ್ನಾಗಿ ಪರಿವರ್ತಿಸುವ ದೂರದೃಷ್ಟಿ ಹೊಂದಿದ್ದೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

Must Read