ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೋವಿಡ್ ನಿರ್ವಹಣೆಯಲ್ಲಿ ಅಗತ್ಯವಾಗಿರುವ ಕೆಲವು ವಸ್ತುಗಳು ಹಾಗೂ ಕಪ್ಪು ಶಿಲೀಂಧ್ರದ ಚಿಕಿತ್ಸೆಗೆ ಬಳಸುವ ಔಷಧಕ್ಕೆ ತೆರಿಗೆ ಪ್ರಮಾಣ ತಗ್ಗಿಸುವ ಕುರಿತು ಚರ್ಚಿಸಲು ಶನಿವಾರದಂದು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಂಡಳಿಯ ಸಭೆ ನಡೆಯಲಿದೆ.
ಪಿಪಿಇ ಕಿಟ್ಗಳು, ಮುಖಗವಸು, ಲಸಿಕೆ ಸೇರಿದಂತೆ ಕೋವಿಡ್ ನಿರ್ವಹಣೆಗೆ ಅಗತ್ಯವಿರುವ ವಸ್ತುಗಳ ಮೇಲಿನ ತೆರಿಗೆ ಪ್ರಮಾಣ ತಗ್ಗಿಸುವ ಬಗ್ಗೆ ಪರಿಶೀಲಿಸಿ, ಶಿಫಾರಸು ಮಾಡಲು ಸಚಿವರ ಸಮಿತಿಯೊಂದನ್ನು ಮೇ 28ರಂದು ನಡೆದ ಜಿಎಸ್ಟಿ ಮಂಡಳಿ ಸಭೆಯು ರಚಿಸಿತ್ತು.
ಸಚಿವರ ಸಮಿತಿಯು ಈಚೆಗೆ ವರದಿ ಸಲ್ಲಿಸಿದ್ದು, ವರದಿಯ ಬಗ್ಗೆ ಚರ್ಚಿಸಿ, ತೆರಿಗೆ ಪ್ರಮಾಣ ತಗ್ಗಿಸುವ ಬಗ್ಗೆ ಪರಿಶೀಲನೆ ನಡೆಸಲು ಜಿಎಸ್ಟಿ ಮಂಡಳಿಯು ಶನಿವಾರ ಸಭೆ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವೈದ್ಯಕೀಯ ಆಮ್ಲಜನಕ, ಪಲ್ಸ್ ಆಕ್ಸಿಮೀಟರ್, ಸ್ಯಾನಿಟೈಸರ್, ಆಮ್ಲಜನಕದ ಕಾನ್ಸನ್ಟ್ರೇಟರ್, ವೆಂಟಿಲೇಟರ್, ಪಿಪಿಇ ಕಿಟ್, ಎನ್-95 ಮುಖಗವಸು ಇತ್ಯಾದಿಗಳಿಗೆ ತೆರಿಗೆ ಪ್ರಮಾಣ ತಗ್ಗಿಸಬೇಕೇ ಅಥವಾ ಅವುಗಳಿಗೆ ತೆರಿಗೆಯಿಂದ ವಿನಾಯಿತಿ ನೀಡಬೇಕೇ ಎಂಬುದನ್ನು ಪರಿಶೀಲಿಸಲು ಸಚಿವರ ಸಮಿತಿಗೆ ಸೂಚಿಸಲಾಗಿದೆ.