Sunday, September 14, 2025

ಜಿಎಸ್‌ಟಿ ಸುಧಾರಣೆ ಪ್ರತಿಯೊಬ್ಬ ನಾಗರಿಕನಿಗೂ ಸಿಕ್ಕ ದೊಡ್ಡ ಗೆಲುವು: ನಿರ್ಮಲಾ ಸೀತಾರಾಮನ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರಕಾರದ ಜಿಎಸ್‌ಟಿ ಸುಧಾರಣೆಗಳು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಿಕ್ಕ ದೊಡ್ಡ ಗೆಲುವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ತಿಳಿಸಿದ್ದಾರೆ.

ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ಹಬ್ಬಗಳನ್ನು ಆಚರಿಸುವುದರಿಂದ, ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆ ಮೇರೆಗೆ ದೀಪಾವಳಿ ಹಬ್ಬಕ್ಕೂ ಮುನ್ನ ಜಿಎಸ್‌ಟಿ ಸುಧಾರಣೆಗಳನ್ನು ಜಾರಿಗೆ ತರಲು ನಿರ್ಧರಿಸಲಾಯಿತು ಎಂದು ಹೇಳಿದರು.

ಈ ಹಿಂದೆ ಜಿಎಸ್‌ಟಿ ಅಡಿಯಲ್ಲಿ ಶೇ 12ರಷ್ಟು ತೆರಿಗೆ ವಿಧಿಸಲಾಗಿದ್ದ ಎಲ್ಲ ಸರಕುಗಳ ಪೈಕಿ ಶೇ 99 ರಷ್ಟು ಈಗ ಶೇ 5ಕ್ಕೆ ಇಳಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ