Thursday, September 4, 2025

GST Shock | 2026ನೇ ಆವೃತ್ತಿಯ ಐಪಿಎಲ್‌ ಪಂದ್ಯಗಳ ಟಿಕೆಟ್‌ ದರ ಇನ್ನಷ್ಟು ದುಬಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸರಕು ಮತ್ತು ಸೇವಾ ತೆರಿಗೆ ಸ್ಲ್ಯಾಬ್‌ ಪರಿಷ್ಕರಣೆ ಬೆನ್ನಲ್ಲೇ 2026ನೇ ಆವೃತ್ತಿಯ ಐಪಿಎಲ್‌ ಪಂದ್ಯಗಳ ಟಿಕೆಟ್‌ ದರ ಇದೀಗ ಇನ್ನಷ್ಟು ದುಬಾರಿಯಾಗಲಿದೆ.

ಇಲ್ಲಿಯವರೆಗೆ ಐಪಿಎಲ್ ಟಿಕೆಟ್‌ಗಳು 28% ರಷ್ಟು ತೆರಿಗೆ ಸ್ಲ್ಯಾಬ್ ಅಡಿಯಲ್ಲಿದ್ದವು. ಆದರೆ ಪರಿಷ್ಕರಣೆಯಾದ ಬಳಿಕ ಇವು 40% ರ ವಿಭಾಗದಲ್ಲಿ ಬರುವುದರಿಂದ ಟಿಕೆಟ್‌ ದರ ಏರಿಕೆಯಾಗಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೆಂಗಳೂರಿನ ಪಂದ್ಯದ ಟಿಕೆಟ್‌ ದರ ಭಾರೀ ಏರಿಕೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ