ಗುಜರಾತ್‌ ವಿರುದ್ಧ ಟಾಸ್‌ ಗೆದ್ದ ಆರ್ಸಿಬಿ ಬ್ಯಾಟಿಂಗ್‌; ಎರಡೂ ತಂಡದಲ್ಲಿ ಪ್ರಮುಖ ಬದಲಾವಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇಂದು ಗುಜರಾತ್‌ ಟೈಟಾನ್ಸ್‌ ವಿರುದ್ಧ ಮಾಡು ಇಲ್ಲವೇ ಮಡಿ ಪಂದ್ಯ. ತಂಟದ ರನ್‌ ರೇಟ್‌ ತೀರಾ ಕುಸಿದಿರುವುದರಿಂದ ಮುಂದೆ ಎಲ್ಲಾ ಪಂದ್ಯಗಳನ್ನು ಗೆಲ್ಲುತ್ತಾ ಸಾಗಿದರಷ್ಟೇ ಪ್ಲೇ ಆಫ್‌ ಗೆ ಅವಕಾಶ. ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ನಾಣ್ಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಈ ಆವೃತ್ತಿಯಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಎರಡನೇ ನಾಯಕ ಅವರು. ಈ ಮುಂಚೆ ಹಾರ್ದಿಕ್‌ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿದ್ದರು. RCB ತನ್ನ ಪ್ಲೇಯಿಂಗ್ XI ನಲ್ಲಿ ಒಂದು ಬದಲಾವಣೆ ಮಾಡಿಕೊಂಡಿದೆ. ಸುಯಶ್ ಪ್ರಭುದೇಸಾಯಿ ಬದಲಿಗೆ ಮಹಿಪಾಲ್ ಲೊಮ್ರೋರ್ ಅವರನ್ನು ಕರೆತಂದಿದೆ. ಗುಜರಾತ್ ಟೈಟಾನ್ಸ್ ಎರಡು ಬದಲಾವಣೆಗಳನ್ನು ಮಾಡಿದೆ. ಅಭಿನವ್ ಮಹೋಹರ್ ಸ್ಥಾನದಲ್ಲಿ ಸಾಯಿಸುದರ್ಶನ್‌, ಯಶ್ ದಯಾಳ್ ಸ್ಥಾನದಲ್ಲಿ ಪ್ರದೀಪ್ ಸಾಂಗ್ವಾನ್ ಕಣಕ್ಕಿಳಿದಿದ್ದಾರೆ.

ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ XI
ಶುಭಮನ್ ಗಿಲ್, ವೃದ್ಧಿಮಾನ್ ಸಹಾ (ವಿಕೆ), ಹಾರ್ದಿಕ್ ಪಾಂಡ್ಯ (ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಪ್ರದೀಪ್ ಸಾಂಗ್ವಾನ್, ಅಲ್ಜಾರಿ ಜೋಸೆಫ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (WK), ಶಹಬಾಜ್ ಅಹ್ಮದ್, ಮಹಿಪಾಲ್ ಲೊಮ್ರೋರ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!