ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ: ಮುಂದಿನ 7 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯ ಮುನ್ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಬೆಂಗಳೂರಿನ ಹಲವೆಡೆ ಇಂದು ಮಧ್ಯಾಹ್ನ ಜಿಟಿಜಿಟಿ ಮಳೆಯಾಗಿದ್ದು, ಅಕ್ಟೋಬರ್ 17ರವರೆಗೆ ಬೆಂಗಳೂರು ಹಾಗೂ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದ ಹವಾಮಾನ ಇಲಾಖೆ ಹೇಳಿದೆ.

ವಿಜಯದಶಮಿಯಂದೆ ಬೆಂಗಳೂರಿನಲ್ಲಿ ಮಳೆಯ ಸಿಂಚನವಾಗಿದ್ದು ಇಂದು ಮಧ್ಯಾಹ್ನದಿಂದಲೇ ನಗರದ ರಿಚ್​ಮಂಡ್​​ ವೃತ್ತ, ಶಾಂತಿನಗರ, ಆಡುಗೋಡಿ, ಕೆಆರ್ ಮಾರ್ಕೆಟ್, ಕಾರ್ಪೊರೇಷನ್​ ಸರ್ಕಲ್​, ಮೆಜೆಸ್ಟಿಕ್​ ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆಯಾಗಿದೆ.

ಪೂರ್ವ ಅರಬ್ಬೀ ಸಮುದ್ರ ತೀರದಲ್ಲಿ ತೀವ್ರವಾಗಿ ವಾಯುಭಾರ ಕುಸಿತವಾಗಿದ್ದು ಮುಂದಿನ 7 ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ. ಇನ್ನು ಹಾವೇರಿ, ಇಲಕಲ್ ಮತ್ತು ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಿದೆ.

ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರುದಿನಗಳವರೆಗೆ ಹಲವು ಕಡೆ ಮಳೆ ಸಾಧ್ಯತೆಯಿದೆ. ಇನ್ನು ಅಕ್ಟೋಬರ್16 ರಿಂದ 18ರವರೆಗೆ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದೆ. ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗಬಹುದು.

ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಕೊಡಗು ಹಾಗೂ ಹಾಸನ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಅಕ್ಟೋಬರ್ 16, 17ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!