Recruitment | ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ 42 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ಮಾಗಡಿ ಮತ್ತು ದೇವನಹಳ್ಳಿಯ ನೂತನ ಕೇಂದ್ರಗಳಿಗೆ ಉಪನ್ಯಾಸಕರು, ಬೋಧಕರು, ಟೆಕ್ನೀಷಿಯನ್‌ ಮತ್ತು ಲೈಬ್ರರಿಯನ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಜನವರಿ 18,2023ರೊಳಗೆ ಅರ್ಜಿ ಹಾಕಬಹುದು.

ಈ ಹುದ್ದೆಗಳಿಗೆ ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಬಿ.ಇ/ಬಿ.ಟೆಕ್‌, ಬಿ.ಲಿಬ್‌ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಡಿಸೆಂಬರ್‌ 31,2022ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 25,000/-ರೂ ವೇತನವನ್ನು ನೀಡಲಾಗುವುದು.

ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅ‍ಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜನವರಿ 18,2023ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ :
Managing Director, Government Tool Room & Training Centre, Rajajinagar, Industrial Estate, Bengaluru-560010.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!