ಹೊಸದಿಗಂತ ಡಿಜಿಟಲ್ ಡೆಸ್ಕ್:
ಇವತ್ತೇ ಚುನಾವಣೆ ನಡೆದರೆ ಕಾಂಗ್ರೆಸ್‌ಗೆ ಕೇವಲ 20 ಸೀಟು ಬರುತ್ತದೆ ಎಂದು ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ.
ಸಿದ್ದರಾಮಯ್ಯ ಸರ್ಕಾರ ಬಂದು ಎರಡು ವರ್ಷ ಆಯ್ತು. ಭಂಡತದನದಿಂದ ಐದು ಗ್ಯಾರಂಟಿ ಕೊಡುತ್ತೇವೆ ಎಂದಿದ್ದರು. ಆದರೆ ಈಗ ಗ್ಯಾರಂಟಿ ಹಣವನ್ನೂ ಕೊಡ್ತಿಲ್ಲ. ಗೃಹಲಕ್ಷ್ಮಿ ಹಣ ಮೂರು ತಿಂಗಳಿಂದ ಖಾತೆಗೆ ಜಮೆ ಆಗಿಲ್ಲ, ಯಾವ ಗ್ಯಾರಂಟಿಯೂ ಸ್ಮಾರ್ಟ್ ಇಲ್ಲ, ಬೋಗಸ್ ಹೇಳಿ ವೋಟ್ ಹಾಕಿಸಿಕೊಂಡು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅವರು ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.