June 14, 2026
Sunday, June 14, 2026
spot_img

ಕೈ ಕೊಡುತ್ತಾ ಗ್ಯಾರಂಟಿ ಯೋಜನೆಗಳು? ಸಿಎಂ ಡಿಕೆ ಶಿವಕುಮಾರ್ ಕೊಟ್ಟ ಸ್ಪಷ್ಟನೆ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರವು ಗ್ಯಾರಂಟಿ ಯೋಜನೆಗಳ ದುರ್ಬಳಕೆ ವಿರುದ್ಧ ಸಮರ ಸಾರಿದ್ದು, ಅದರಲ್ಲೂ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳ ಪರಿಷ್ಕರಣೆಗೆ ಮುಂದಾಗಿದೆ. ಅದಕ್ಕಾಗಿ ಅರ್ಹ ಫಲಾನುಭವಿಗಳನ್ನು ಮರುದೃಢೀಕರಿಸಲು ಹೊಸದಾಗಿ ಅರ್ಜಿ ಸಲ್ಲಿಸುವಂತೆ ಆದೇಶ ಹೊರಡಿಸಲಾಗಿದೆ.

ಈ ಬೆನ್ನಲ್ಲೇ ರಾಜ್ಯ ಸರಕಾರದ ವಿರುದ್ಧ ವಿಪಕ್ಷಗಳು ಕಿಡಿಕಾರಿದ್ದು, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಸಂಚು ರೂಪಿಸಿದೆ ಎಂದು ಟೀಕಿಸುತ್ತಿದೆ. ಹೀಗಾಗಿ ಈ ಕುರಿತು ಸ್ವತಃ ಸಿಎಂ ಡಿಕೆ ಶಿವಕುಮಾರ್ ಅವರು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಸುಳ್ಳು ಮಾಹಿತಿಗಳಿಗೆ ಕಿವಿಗೊಡಬಾರದು

ರಾಜ್ಯದಲ್ಲಿ ಗೃಹಲಕ್ಷ್ಮಿ, ಗೃಹಜ್ಯೋತಿ ಸಹಿತ ಯಾವುದೇ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಈ ಕುರಿತು ವಿಪಕ್ಷಗಳು ಜನತೆಯಲ್ಲಿ ಗೊಂದಲ ಸೃಷ್ಟಿಸಲು ವದಂತಿಗಳನ್ನು ಹಬ್ಬಿಸುತ್ತಿದ್ದು, ಯಾರು ಕೂಡ ಅಂತಹ ಸುಳ್ಳು ಮಾಹಿತಿಗಳಿಗೆ ಕಿವಿಗೊಡಬಾರದು ಎಂದು ಅವರು ಮನವಿ ಮಾಡಿದ್ದಾರೆ.

ದುರ್ಬಳಕೆ ತಡೆಗಟ್ಟಲು ಮರು ಅರ್ಜಿ

ರಾಜ್ಯದಲ್ಲಿ ಅನೇಕ ಪ್ರಮಾಣದಲ್ಲಿ ನಕಲಿ ದಾಖಲೆ ಸೃಷ್ಟಿ ಯೋಜನೆಗಳ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಅದಕ್ಕಾಗಿ ಇಂತಹ ದುರ್ಬಳಕೆಯನ್ನು ತಡೆಗಟ್ಟಿ, ಸರ್ಕಾರದ ಹಣ ನೇರವಾಗಿ ಅರ್ಹರಿಗೆ ತಲುಪುವಂತೆ ಮಾಡುವ ಉದ್ದೇಶದಿಂದ ಫಲಾನುಭವಿಗಳ ದೃಢೀಕರಣ ಮುಖ್ಯ. ಅದಕ್ಕಾಗಿ ಮತ್ತೆ ಅರ್ಜಿ ಸಲ್ಲಿಸಲು ಹೇಳಲಾಗಿದೆ. ಅದನ್ನು ಬಿಟ್ಟು ಯೋಜನೆ ನಿಲ್ಲಿಸಲ್ಲ. ಈ ಬಗ್ಗೆ ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !