ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸದಿಗಂತ ವರದಿ, ತುಮಕೂರು :

ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ. ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಜನರು ಆರ್ಥಿಕ ಸಬಲತೆಗೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದ ಶ್ರೀದೇವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕುರುಬ ಸಮುದಾಯದ ಸಾಹಿತಿಗಳ ಸಮಾವೇಶದಲ್ಲಿ ಮಾತನಾಡಿ, ಆರ್ಥಿಕವಾಗಿ, ಸಾಮಾಜಕವಾಗಿ ಶಕ್ತಿ ಬಂದರೆ, ಸಮಾನತೆ ಬರಲು ಸಾಧ್ಯವಾಗುತ್ತದೆ.ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಿಂದ ಬಹಳ ಉಪಯೋಗವಾಗಿದೆ. ಇದನ್ನು ಸಹಿಸದವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.

ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಲ ಪಟ್ಟ ಭದ್ರ ಹಿತಾಸಕ್ತಿಗಳು ಇದು ದೊಡ್ಡ ತಪ್ಪು ಅಂತ ಮಾತನಾಡುತ್ತಾರೆ. ಉಚಿತ ಬಸ್ ಯೋಜನೆಯಿಂದ ಧರ್ಮಸ್ಥಳಕ್ಕೆ ಬರುವ ಭಕ್ತರ ಸಂಖ್ಯೆ ಅಧಿಕವಾಗಿದೆ ಎಂದು ವೀರೇಂದ್ರ ಹೆಗ್ಡೆ ಅವರು ನನಗೆ ಪತ್ರ ಬರೆದಿದ್ದರು ಎಂದರು.

ಗೃಹಲಕ್ಷ್ಮಿ ಯೋಜನೆಯಿಂದ ಬಡ ಕುಟುಂಬಗಳು ಆರ್ಥಿಕ ಸದೃಢತೆ ಪಡೆದುಕೊಂಡಿವೆ. 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಿದ್ದೇನೆ. ಹಿಂದುಳಿದವರು ಜಾರಿ ಸಮಾವೇಶ ಮಾಡಲಿ, ಮುಂದುವರೆದವರು ಮಾಡಬಾರದು ಎಂದು ಲೋಹಿಯಾ ಹೇಳುತ್ತಿದ್ದರು.ಇದೆಲ್ಲ ಚಿಂತನೆ ಮಾಡಬೇಕು ನನಗೆ ಗೊತ್ತಿರುವ ವಿಚಾರ ಹೇಳಿದ್ದೇನೆ. ಇದರಿಂದ ಕೆಲವರಿಗೆ ನೋವಾದರೆ ನಾನು ಏನು ಮಾಡುವುದಕ್ಕೆ ಆಗಲ್ಲ. ನನ್ನ ಮನಸ್ಸಿನಲ್ಲಿರುವುದನ್ನು ಹೇಳಿದ್ದೇನೆ ಎಂದು ಹೇಳಿಕೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!