ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನು ಯಾವುದೇ ಮಹಿಳೆಯರನ್ನು ಅಪಮಾನಿಸಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.
ಗ್ಯಾರಂಟಿ ಹೆಸರಲ್ಲಿ ನಿಮ್ಮನ್ನು ವಂಚಿಸುತ್ತಿದ್ದಾರೆ. ಖಾತರಿ ಯೋಜನೆಗಳಿಂದ ಅಮಾಯಕ ಜನರನ್ನು ಮತ್ತು ಮಹಿಳೆಯರ ದಾರಿ ತಪ್ಪಿಸುತ್ತಿದ್ದಾರೆ ಎಂದು ನಾನು ಹೇಳಿದ್ದೆ ಹೊರತು ಬೇರೆ ಯಾವ ಉದ್ದೇಶದಿಂದ ಹೇಳಿಕೆ ನೀಡಿಲ್ಲ ಎಂದು ತಿಳಿಸಿದ್ದಾರೆ.
ಕಠಿಣ ಸಮಯದಲ್ಲಿ ನಾನು ರಕ್ಷಣೆ ನೀಡಿದ್ದೇನೆ. ನಾನು ಸಿಎಂ ಆಗಿದ್ದಾಗ ಮಹಿಳೆಯರಿಗಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೆ. ಮಹಿಳೆಯರ ಪ್ರತಿಭಟನೆಗೆ ಪ್ರತಿಯಾಗಿ, ನಾನು ರಾಜ್ಯದಲ್ಲಿ ಸಾರಾಯಿ ಅನ್ನು ನಿಷೇಧಿಸಿದ್ದೆ. ನಾನು ಮಹಿಳೆಯರ ಬಗ್ಗೆ ಕೇವಲವಾಗಿ ಮಾತನಾಡಿಲ್ಲಾ ಎಂದು ಹೆಚ್ಡಿಕೆ ಹೇಳಿದ್ದಾರೆ.