ಗ್ಯಾರಂಟಿಗಳಿಂದ ‘ರಾಜ್ಯ ದಿವಾಳಿ’ ಎಂದವರಿಗೆ ಉತ್ತರ ಸಿಕ್ಕಿದೆ, ಇದು ಹೀಗೆ ಮುಂದುವರಿಯುತ್ತೆ: ಸಿಎಂ ಸಿದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಮುಂದುವರೆಯುತ್ತವೆ. ಗ್ಯಾರಂಟಿ ಯೋಜನೆಗಳಿಂದ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ಉತ್ತರ ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಆರ್ಥಿಕ ಬೆಳವಣೆಗಯನ್ನ ಸಾಧಿಸಿ ಉತ್ತರ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು.

ಭಾಷಣದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನು ಮೆರೆಯಲಾಗದು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಬಲಿದಾನಕ್ಕೆ ಬೆಲೆಕಟ್ಟಲಾಗದು ಎಂದು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.

ಸರ್ಕಾರದ ಗ್ಯಾರಂಟಿ ಗಳಿಂದ ಪ್ರತಿಯೊಬ್ಬ ಫಲಾನುಭವಿಗೆ ಅನುಕೂಲ ಆಗಿದೆ. ಸುಮಾರು 4 ರಿಂದ 5 ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಅನೇಕ ಬಡಕುಟುಂಬಗಳಿಗೆ ಅನುಕೂಲವಾಗಿದೆ. ಈ ಯೋಜನೆಗಳು ರಾಜ್ಯದಲ್ಲಿ ಮುಂದುವರೆಯುತ್ತಿದೆ. ಇದರಿಂದ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ಉತ್ತರ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಆರ್ಥಿಕ ಬೆಳವಣೆಗಯನ್ನ ಸಾಧಿಸಿ ಉತ್ತರ ನೀಡುತ್ತೇವೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!