ನಡು ರಸ್ತೆಯಲ್ಲಿ ಗಜಪಡೆಯ ಪೆರೇಡ್: ಹೈರಾಣಾದರು ಚಿಕ್ಕಬಿಕ್ಕೋಡಿನ ಜನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೇಲೂರು ತಾಲೂಕಿನ ಚಿಕ್ಕಬಿಕ್ಕೋಡು ಬಳಿ ಕಾಡಾನೆಗಳು ಬೀಡುಬಿಟ್ಟಿದ್ದು, ನಾಗರಿಕರಿಗೆ ಹೊಸ ಆತಂಕ ತಂದಿಟ್ಟಿವೆ. ಈ ಭಾಗದಲ್ಲಿ ಬರೋಬ್ಬರಿ 23 ಕ್ಕೂ ಹೆಚ್ಚು ಕಾಡಾನೆ ಹಿಂಡು ಏಕಾಏಕಿ ರಸ್ತೆ ದಾಟುವ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಚರ್ಚೆಗೆ ಗ್ರಾಸವಾಗಿದೆ.
ಈ ಭಾಗದ ಕಾಫಿ ತೋಟದಲ್ಲಿ ಒಂದೇ ಕಡೆ ಬೀಡು ಬಿಟ್ಟಿರುವ ಕಾಡಾನೆಗಳನ್ನು ಮರಳಿ ಕಾಡಿಗೆ ಅಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಆನೆಗಳನ್ನು ಓಡಿಸಲು ಪಟಾಕಿ ಸಿಡಿಸುತ್ತಿರುವುದರಿಂದ ಕಾಡಾನೆಗಳು ಎಲ್ಲೆಂದರಲ್ಲಿ ಓಡಾಡಲು ಆರಂಭಿಸಿದ್ದು, ಹೊಸ ಚಿಂತೆಗೆ ಕಾರಣವಾಗಿದೆ. ಈ ಆನೆಗಳ ಜೊತೆಯಲ್ಲೇ ಗಾಯಗೊಂಡಿರುವ ಸಲಗವೂ ಸೇರಿಕೊಂಡಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳ ಚಲನವಲನದ ಬಗ್ಗೆ ಮೈಕ್ ಮೂಲಕ ಎಚ್ಚರಿಕೆ ನೀಡುತ್ತಿದ್ದಾರೆ. ಈ ಭಾಗದ ಕಾರ್ಮಿಕರು, ರೈತರು, ಶಾಲಾ ಮಕ್ಕಳು, ಫೋಷಕರು, ಜನರು ಸಂಚರಿಸುವಾಗ ಎಚ್ಚರಿಕೆ ವಹಿಸುವಂತೆ ಇಲಾಖೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!