ಹೊಸದಿಗಂತ ಡಿಜಿಟಲ್ ಡೆಸ್ಕ್ :
ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ (ವಾಸು) ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ವಿಧಾನಸಭೆ ಸಬಾಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ಸ್ವ ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ.
ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಬಗ್ಗೆ ಬಹಿರಂಗವಾಗಿಯೇ ಹೇಳಿಕೊಂಡಿದ್ದ ಅವರು, ಪಕ್ಷ ತೊರೆಯುವ ಬಗ್ಗೆಯೂ ಹೇಳಿಕೆ ನೀಡಿದ್ದರು. ಇದೀಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.