ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ವಿಶ್ವವಿದ್ಯಾಲಯಗಳ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ತಮ್ಮ ಸೇವೆಯನ್ನು ಆದಷ್ಟು ಬೇಗ ಕಾಯಂಗೊಳಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯವು 1998 ರಿಂದ ಖಾಲಿ ಇರುವ ಪ್ರಾಧ್ಯಾಪಕ ಅಥವಾ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಯಾವುದೇ ನೇಮಕಾತಿಯನ್ನು ನಡೆಸಿಲ್ಲ ಎಂದು ಸಂಘದ ಅಧ್ಯಕ್ಷ ಡಾ. ಗಂಗಾಧರ ರೆಡ್ಡಿ ಎನ್ ಸೋಮವಾರ ಹೇಳಿದ್ದಾರೆ.
ಇದು ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣ ಮತ್ತು ಸಂಶೋಧನೆಯ ಗುಣಮಟ್ಟ ಕುಸಿಯಲು ಕಾರಣವಾಗುತ್ತದೆ ಎಂದು ಅವರು ಹೇಳಿದರು.
ಮೈಸೂರು, ತುಮಕೂರು, ಹಂಪಿ, ಗುಲ್ಬರ್ಗ ಮತ್ತು ಕರ್ನಾಟಕ ವಿಶ್ವವಿದ್ಯಾಲಯ ಸೇರಿದಂತೆ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿಯೂ “ಅತಿಥಿ ಉಪನ್ಯಾಸಕರೇ ಶೇ. 94 ರಷ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

