Sunday, August 14, 2022

Latest Posts

ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಲು ಒತ್ತಾಯಿಸಿ ಪ್ರತಿಭಟನೆ

ಹೊಸ ದಿಗಂತ ವರದಿ, ಮೈಸೂರು:

ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕ ಸಮನ್ವಯ ಸಮಿತಿ ಜಿಲ್ಲಾ ಸಮಿತಿಯಿಂದ ಮೈಸೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಪ್ರತಿಭಟನಾಕಾರರು, ಕೆಲಕಾಲ ಧರಣಿ ನಡೆಸಿ, ನಾನಾ ಘೋಷಣೆಗಳನ್ನು ಕೂಗಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಹಲವು ವರ್ಷಗಳಿಂದ ರಾಜ್ಯಾದ್ಯಂತ ಸುಮಾರು 14 ಸಾವಿರ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದರೂ, ಸೇವಾ ಭದ್ರತೆ ಇಲ್ಲ. ಕೊರೋನಾದಿಂದ ಕೆಲಸ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಹಲವು ವರ್ಷಗಳಿಂದ ಈ ಬಗ್ಗೆ ಹೋರಾಟ ಮಾಡುತ್ತಾ ಬಂದಿದ್ದೇವೆ. ಈ ಬಗ್ಗೆ ಸರ್ಕಾರವಾಗಲಿ ಅಥವಾ ಸಂಬoಧಪಟ್ಟ ಇಲಾಖೆಯ ಅಧಿಕಾರಿಗಳು ಗಮನಹರಿಸಿಲ್ಲ.
ಹೀಗಾಗಿ ಕೂಡಲೇ ಈ ಬಗ್ಗೆ ಸರ್ಕಾರ ಗಮನಹರಿಸಬೇಕು. ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿ ಸೇವಾ ಭದ್ರತೆ ನೀಡಬೇಕು. ಪ್ರಸ್ತುತ ವಿಧಾನಸಭೆ ಹಾಗೂ ವಿಧಾನಮಂಡಲ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಬೇಕು. ಈ ಮೂಲಕ ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss