Saturday, January 28, 2023

Latest Posts

ಸಾವು ಬದುಕಿನೊಂದಿಗೆ ಹೋರಾಡುತ್ತಿದ್ದ ಅತಿಥಿ ಶಿಕ್ಷಕಿ ಗೀತಾ ಬಾರಕೇರ ಸಾವು

ಹೊಸದಿಗಂತ ವರದಿ ಗದಗ :

ಅತಿಥಿ ಶಿಕ್ಷಕನ ಮಾರಣಾಂತಿಕ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿ ಗೀತಾ ಬಾರಕೇರ ಅವರು
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಾವನ್ನಪ್ಪಿದ್ದಾರೆ.

ಡಿ. 19 ರಂದು ನರಗುಂದ ತಾಲ್ಲೂಕಿನ ಹದಲಿ ಗ್ರಾಮದ ಸರಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ ಎಂಬುವರಿಂದ ಹಲ್ಲೆಗೊಳಗಾಗಿ ಗಾಯಗೊಂಡಿದ್ದರು. ಅನೈತಿಕ ಕಾರಣದಿಂದ ಅತಿಥಿ ಶಿಕ್ಷಕಿಯ ಮಗ ಭರತ್ ಹಾಗೂ ಗೀತಾಳ‌ ಮೇಲೆ ಆರೋಪಿ ಮುತ್ತಪ್ಪ ಹಡಗಲಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದನು.

ಅಂದೇ ಭರತ್ ಸಾವನ್ನಪ್ಪಿದ್ದ, ಗಂಭೀರವಾಗಿ ಗಾಯಗೊಂಡಿದ್ದ ಗೀತಾ ಬಾರಕೇರ್ ಗುರುವಾರ ಸಾವನ್ನಪ್ಪಿದ್ದಾರೆ. ಈ ಕುರಿತು ನರಗುಂದ ಪೊಲೀಸ‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!