ಸಿಇಟಿ ಪರೀಕ್ಷೆಗೆ ಮಾರ್ಗಸೂಚಿ ಪ್ರಕಟ: ಹಿಜಾಬ್‍ ನಿಷೇಧ, ಅಕ್ರಮ ನಡೆಯದಂತೆ ಹದ್ದಿನ ಕಣ್ಣು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆಗೂ ಮುನ್ನ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಹಿಜಾಬ್‍ ಧರಿಸುವುದಕ್ಕೆ ನಿಷೇಧ ಹೇರಲಾಗಿದೆ.

ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮುನ್ನ ಹಿಜಾಬ್ ತೆಗೆದಿಡಬೇಕು. ಒಂದು ವೇಳೆ ಹಿಜಾಬ್ ಧರಿಸಿ ಬಂದರೆ ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದೆ.

ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಮಾದರಿಯಲ್ಲೇ ಸಿಇಟಿ ಪರೀಕ್ಷೆ ನಡೆಸಲಾಗುವುದು. ಯಾವುದೇ ಧರ್ಮಸೂಚಕ ವಸ್ತ್ರ ಧರಿಸಿ ಬರುವಂತಿಲ್ಲ. ಜೂನ್​ 16, 17 ಮತ್ತು 18ರಂದು ನಡೆಯಲಿರುವ ಸಿಇಟಿಗೆ ಸಮವಸ್ತ್ರ ಪಾಲನೆಯ ಮಾರ್ಗಸೂಚಿ ಪ್ರಕಟಿಸಲಾಗಿದೆ.

ನೀಟ್ ಪರೀಕ್ಷೆ ಮಾದರಿಯಲ್ಲೇ ಸಿಇಟಿ ನಡೆಸಲಾಗುವುದು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮಾಂಗಲ್ಯ ಸರ, ಮೂಗುತಿ, ಓಲೆ, ಸರ, ಬಳೆ ಸೇರಿದಂತೆ ಯಾವುದೇ ರೀತಿಯ ಆಭರಣ ಧರಿಸಿ ಬರುವಂತಿಲ್ಲ. ವಾಚ್, ಕ್ಯಾಲ್ಕುಲೇಟರ್ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ. ಮಾತ್ರವಲ್ಲ ಇದೇ ಮೊದಲ ಬಾರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಹಾಗೂ ಮೆಟಲ್ ಡಿಟೆಕ್ಟರ್​​ಗಳನ್ನು ಅಳವಡಿಕೆ ಮಾಡಲಾಗುತ್ತಿದೆ.

ಸಿಇಟಿಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಹದ್ದಿನ ಕಣ್ಣಿಡಲಾಗಿದ್ದು, ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಅದೇ ರೀತಿ ಪರೀಕ್ಷೆ ನಡೆಯುವ ದಿನಗಳಲ್ಲಿ ಸುತ್ತಮುತ್ತಲ ಜೆರಾಕ್ಸ್ ಅಂಗಡಿಗಳನ್ನು ತೆರೆಯದಂತೆ ಆದೇಶ ಹೊರಡಿಸಲಾಗಿದೆ ಎಂದು ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿ ರಮ್ಯ ವಿವರಿಸಿದ್ದಾರೆ.

ಒಟ್ಟು 2.11 ಲಕ್ಷ ವಿದ್ಯಾರ್ಥಿಗಳು ಸಿಇಟಿಗೆ ನೋಂದಣಿ ಮಾಡಿಸಿದ್ದಾರೆ. ಇದರಲ್ಲಿ 1.4 ಲಕ್ಷ ಪುರುಷರು ಹಾಗೂ 1.7 ಲಕ್ಷ ಮಹಿಳಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ ಎಂದು ರಮ್ಯ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!