ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಗೈಡ್ ಲೈನ್ಸ್ : ಡಿ.31ರ ಮಧ್ಯರಾತ್ರಿಯಿಂದ ಅನ್ವಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಹೊಸ ವರ್ಷಕ್ಕೆ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯಿಂದ ಗೈಡ್ ಲೈನ್ಸ್ ಸಿದ್ದವಾಗಿದ್ದು, ಇದರಿಂದ ಸಿಲಿಕಾನ್ ಸಿಟಿಯಲ್ಲಿ ನ್ಯೂ ಇಯರ್ ಗುಂಗಿನಲ್ಲಿದ್ದವರಿಗೆ ಲಗಾಮು ಬೀಳಲಿದೆ. ಈ ಬಾರೀ ಹೆಚ್ಚು ಸಿಸಿಟಿವಿ ಅಳವಡಿಕೆಗೆ ಪಾಲಿಕೆಗೆ ಸೂಚನೆ ನೀಡಲಾಗಿದೆ.

ಡಿ.31 ರ ಮಧ್ಯರಾತ್ರಿಯಂದು ಯುವ ಜನಾಂಗ ಬೆಂಗಳೂರಿನಲ್ಲಿ ಕುಣಿದು ಕುಡಿದು ಹೊಸ ವರ್ಷವನ್ನು ಸ್ವಾಗತಿಸುತ್ತಾರೆ. ಆ ಸಮಯದಲ್ಲಿ ಅಹಿತಕರ ಘಟನೆಗಳು ನಡೆಯುತ್ತವೆ.
ಹಾಗಾಗಿ ಈ ಬಾರಿ ಪಾಲಿಕೆ ಪೊಲೀಸ್ ಇಲಾಖೆ ಜೊತೆ ಸೇರಿ ಕೆಲವು ಗೈಡ್ ಲೈನ್ಸ್ ಹೊರ ತಂದಿದೆ. ನಗರದೆಲ್ಲೆಡೆ ಸಿಸಿಟಿವಿ ಅಳವಡಿಸಿ ಅಹಿತಕರ ಘಟನೆ ತಡೆಯಲಾಗುತ್ತದೆ.

ಗೈಡ್ ಲೈನ್ಸ್ ನಲ್ಲಿ ಏನಿದೆ?
ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು.
ಎಂ.ಜಿ.ರಸ್ತೆ,ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ ನೀಡಲಾಗುತ್ತದೆ
ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್ ಗಳು ಬಂದ್ ಆಗಲಿದೆ
ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ
ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್
ಸೆಲೆಬ್ರೇಷನ್ ಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ
ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ
ಬಾರ್, ಪಬ್ ಗಳಿಗೂ ರಾತ್ರಿ 1 ಗಂಟೆ ಬಳಿಕ ಬಂದ್ ಗೆ ಸೂಚನೆ ನೀಡಿದೆ
ನಗರದ ವಿವಿಧ ಭಾಗಗಳಲ್ಲಿ ಆಚರಣೆಗೆ ಅನುಮತಿ ಕಡ್ಡಾಯ
ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ
ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸಂಚಾರ ವ್ಯವಸ್ಥೆ
ರಾತ್ರಿ 1 ಗಂಟೆ ತನಕ ಮಾತ್ರ ನಮ್ಮ ಮೆಟ್ರೋ ಸಂಚಾರ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!