Thursday, September 29, 2022

Latest Posts

ಪಾದಚಾರಿಗಳ ಮೇಲೆ ಹರಿದ ಕಾರು: ಆರು ಸಾವು, ಏಳು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದು ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ನಿಯಂಯ್ರಣ ತಪ್ಪಿ ಕಾರು ಏಕಾಏಕಿ ಪಾದಾಚಾರಿಗಳ ಮೇಲೆ ಹರಿದಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಪರಿಣಾಮ ಆರು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಅಪಘಾತದಲ್ಲಿ ಇನ್ನೂ ಏಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇಂದು ಬೆಳಗ್ಗೆ ಪಾದಾಚಾರಿ ಮಾರ್ಗದಲ್ಲಿ ಕೆಲಸಕ್ಕೆ ನಡೆದು ಹೋಗುತ್ತಿದ್ದವರ ಮೇಲೆ ಇದ್ದಕ್ಕಿದ್ದಂತೆ ಕಾರು ಹರಿದಿದೆ. ಅವರೆಲ್ಲರೂ ಅಂಬಾಜಿಗೆ ಕೆಲಸಕ್ಕೆ ಹೋಗುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಘಟನೆಯ ಸಂಪೂರ್ಣ ವಿವರ ಇನ್ನಷ್ಟೇ ತಿಳಿಯಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!