Sunday, February 5, 2023

Latest Posts

ಮೊದಲ ಹಂತದ ಮತದಾನಕ್ಕೆ ಸಜ್ಜಾದ ಗುಜರಾತ್: ಇಂದು 89 ಸ್ಥಾನಗಳಿಗೆ ವೋಟಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಮತದಾನ ಇಂದು ನಡೆಯಲಿದೆ. ಮತದಾನಕ್ಕೆ ಸಕಲ ಸಿದ್ಧತೆಗಳನ್ನು ಚುನಾವಣಾ ಆಯೋಗ ಮಾಡಿಕೊಂಡಿದೆ. ಎರಡನೇ ಹಂತದ ಮತದಾನ ಡಿಸೆಂಬರ್ 5 ರಂದು ನಡೆಯಲಿದೆ.

ಕಚ್, ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ನ 19 ಜಿಲ್ಲೆಗಳ 89 ಸ್ಥಾನಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಬೆಳಗ್ಗೆ 8 ರಿಂದ ಮತದಾನ ಆರಂಭವಾಗಲಿದ್ದು, ಸಂಜೆ 5 ರವರೆಗೆ ನಡೆಯಲಿದೆ.

43,324 ಬ್ಯಾಲೆಟ್ ಯೂನಿಟ್, 34,324 ಕಂಟ್ರೋಲ್ ಯೂನಿಟ್ ಮತ್ತು 38,749 ವಿವಿಪ್ಯಾಟ್ ಯಂತ್ರಗಳನ್ನು ಬಳಸಲಾಗುತ್ತಿದೆ. ನಗರ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಒಟ್ಟಾರೆ 25,430 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮೊದಲ ಹಂತದಲ್ಲಿ ಒಟ್ಟು 788 ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದಾರೆ. ಇದರಲ್ಲಿ70 ಮಹಿಳಾ ಸ್ಪರ್ಧಿಗಳು ಇದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!