ನಾವು ಅಧಿಕಾರಕ್ಕೆ ಬಂದರೆ ನರೇಂದ್ರ ಮೋದಿ ಸ್ಟೇಡಿಯಂ ಹೆಸರು ಬದಲಾಯಿಸುತ್ತೇವೆ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಗುಜರಾತ್‌ನಲ್ಲಿ ಅಧಿಕಾರಕ್ಕೆ ಬಂದರೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಮಾಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.
ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಕಾಂಗ್ರೆಸ್ ಹಿರಿಯ ನಾಯಕ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪಕ್ಷವು ಸರ್ಕಾರ ರಚಿಸಿದರೆ ಮೊದಲ ಕ್ಯಾಬಿನೆಟ್ ಸಭೆಯಲ್ಲಿಯೇ ಚುನಾವಣಾ ಪ್ರಣಾಳಿಕೆಯನ್ನು ಅಧಿಕೃತ ದಾಖಲೆಯಾಗಿ ಕಾಂಗ್ರೆಸ್ ಸ್ವೀಕರಿಸುತ್ತದೆ ಎಂದು ಹೇಳಿದರು.
ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ. ನಾವು ಅಧಿಕಾರಕ್ಕೆ ಬಂದ ಮೇಲೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಅನ್ನುಸರ್ದಾರ್ ಪಟೇಲ್ ಸ್ಟೇಡಿಯಂ ಎಂದು ಮರುನಾಮಕರಣ ಮಾಡುವುದಾಗಿ ಕಾಂಗ್ರೆಸ್‌ ಹೇಳಿಕೊಂಡಿದೆ.
ಎಲ್ಲಾ ಗುಜರಾತಿಗಳಿಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ. ಕಾಂಗ್ರೆಸ್ ಪ್ರಣಾಳಿಕೆಯು ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇಕಡಾ 50 ರಷ್ಟು ಮೀಸಲಾತಿ ನೀಡುವುದಾಗಿ ಹೇಳಿದೆ. ರಾಜ್ಯದ ಪ್ರತಿಯೊಬ್ಬ ಮಹಿಳೆ, ವಿಧವೆ ಮತ್ತು ವೃದ್ಧ ಮಹಿಳೆಗೆ ಮಾಸಿಕ ₹ 2,000 ಅನುದಾನವನ್ನು ನೀಡುವುದಾಗಿ ಹೇಳಲಾಗಿದೆ.
ಎಲ್ಲಾ ಗುಜರಾತಿಗಳಿಗೆ ಗರಿಷ್ಠ ₹ 10 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಮತ್ತು ₹ 5 ಲಕ್ಷದವರೆಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಔಷಧಿಗಳನ್ನು ನೀಡುತ್ತಿರುವ ಕಾಂಗ್ರೆಸ್, ರಾಜ್ಯದಲ್ಲಿ ₹ 4 ಲಕ್ಷ ಕೋವಿಡ್ ಪರಿಹಾರವನ್ನು ನೀಡುವುದಾಗಿ ಭರವಸೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!