ಮತ್ತೊಮ್ಮೆ ಗುಜರಾತ್‌ ಸಿಎಂ ಆಗಿ ಭೂಪೇಂದ್ರ ಪಟೇಲ್: ಸೋಮವಾರ ಪ್ರಮಾಣ ವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಗುಜರಾತಿನ ಮುಖ್ಯಮಂತ್ರಿ ಸ್ಥಾನಕ್ಕೆ ಭೂಪೇಂದ್ರ ಪಟೇಲ್ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾದರು. ರಾಜ್ಯ ರಾಜಧಾನಿ ಗಾಂಧಿನಗರದಲ್ಲಿ ಶನಿವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕೇಂದ್ರ ಸಂಸದೀಯ ನಾಯಕರಾದ ರಾಜನಾಥ್ ಸಿಂಗ್, ಬಿಎಸ್ ಯಡಿಯೂರಪ್ಪ ಮತ್ತು ಅರ್ಜುನ್ ಮುಂಡಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭೂಪೇಂದ್ರ ಪಟೇಲ್ ಹೆಸರನ್ನು ಪ್ರಸ್ತಾಪಿಸಿದರು. ಭೂಪೇಂದ್ರ ಅವರಿಗೆ ಪೈಪೋಟಿ ನೀಡಲು ಯಾರೂ ಸಿಎಂ ರೇಸ್‌ಗೆ ಬರದ ಕಾರಣ ಎಲ್ಲ ಶಾಸಕರು ಒಕ್ಕೊರಲಿನಿಂದ ಬೆಂಬಲಿಸಿದರು.

ಚುನಾವಣಾ ಫಲಿತಾಂಶದ ನಂತರವೇ ಭೂಪೇಂದ್ರ ಪಟೇಲ್ ಮುಂದಿನ ಮುಖ್ಯಮಂತ್ರಿ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ವಾಸ್ತವವಾಗಿ ಇಂದಿನ ಶಾಸಕರ ಆಯ್ಕೆ ನಾಮಮಾತ್ರವಾಗಿದೆ. ಸೋಮವಾರ (ಡಿಸೆಂಬರ್ 12) ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 182 ಕ್ಷೇತ್ರಗಳಲ್ಲಿ ಬಂಪರ್ ಬಹುಮತದೊಂದಿಗೆ ಗೆದ್ದಿದೆ. ಒಟ್ಟು 156 ಸ್ಥಾನಗಳನ್ನು ಗೆದ್ದು ಎಲ್ಲಾ ದಾಖಲೆಗಳನ್ನು ಮುರಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!