ಗುಜರಾತ್ ಸೇತುವೆ ಕುಸಿತ: ನಾಳೆ ಮೊರ್ಬಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 1 ರಂದು ಗುಜರಾತ್‌ನ ಮೊರ್ಬಿಗೆ ಭೇಟಿ ನೀಡಲಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ಕಚೇರಿ ಸೋಮವಾರ ಪ್ರಕಟಿಸಿದೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ಯಾವುದೇ ಸಡಿಲಿಕೆ ಇಲ್ಲ ಕೇಂದ್ರವೂ ರಾಜ್ಯ ಸರ್ಕಾರಕ್ಕೆ ಎಲ್ಲಾ ಸಹಾಯವನ್ನು ನೀಡುತ್ತಿದೆ ಎಂದು ಕೆವಾಡಿಯಾದ ಏಕತಾ ನಗರದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 147 ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಈ ವಿಷಯ ತಿಳಿಸಿದರು.

ನಾನು ಏಕತಾ ನಗರದಲ್ಲಿದ್ದೇನೆ ಆದರೆ ನನ್ನ ಮನಸ್ಸು ಸಂಪೂರ್ಣ ಮೊರ್ಬಿ ಸಂತ್ರಸ್ತರ ಜೊತೆಗಿದೆ. ನನ್ನ ಜೀವನದಲ್ಲಿ ಆಗಾಗ ಇಂತಹ ನೋವನ್ನು ಅನುಭವಿಸುತ್ತಿದ್ದೇನೆ. ಒಂದೆಡೆ ನೋವಿನಿಂದ ಕೂಡಿದ ಹೃದಯವಿದ್ದರೆ ಮತ್ತೊಂದೆಡೆ ಕರ್ತವ್ಯದ ಹಾದಿಯಿದೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ನಿನ್ನೆ ರಾತ್ರಿ ಮೊರ್ಬಿಗೆ ತಲುಪಿದ್ದಾರೆ. ನಿನ್ನೆಯಿಂದ ಬಿಡುವಿಲ್ಲದೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ ಎಂದರು. ಗುಜರಾತ್ ಮತ್ತು ರಾಜಸ್ಥಾನಕ್ಕೆ ಮೂರು ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ಇಂದು ಅಹಮದಾಬಾದ್‌ನಲ್ಲಿ ನಡೆಯಬೇಕಿದ್ದ ರೋಡ್‌ಶೋ ಅನ್ನು ರದ್ದುಗೊಳಿಸಿದ್ದಾರೆ.

ಸೇತುವೆ ಕುಸಿತದ ದುರಂತದಲ್ಲಿ ಗುಜರಾತ್ ಪೊಲೀಸರು ಐಪಿಸಿ ಸೆಕ್ಷನ್ 304 ಮತ್ತು 308 ಅಡಿಯಲ್ಲಿ ಎಫ್‌ಐಆರ್‌ ದಾಖಲು ಮಾಡಿದ್ದಾರೆ. ಸೇತುವೆ ಕುಸಿತದ ಘಟನೆಯ ತನಿಖೆಗಾಗಿ ಗುಜರಾತ್ ಸರ್ಕಾರವು ಐವರು ಸದಸ್ಯರ ಸಮಿತಿಯನ್ನು ರಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!