ಮಾನಹಾನಿ ಪ್ರಕರಣ : ರಾಹುಲ್‌ ಗಾಂಧಿಗೆ ಜಾಮೀನು ನೀಡಿದ ಗುಜರಾತ್‌ ನ್ಯಾಯಾಲಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮೋದಿ ಉಪನಾಮದ ಕುರಿತ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೇಲ್ಮನವಿ ಅರ್ಜಿಯ ವಿಚಾರಣೆಗೆ ಗುಜರಾತ್​​ನ ಸೂರತ್​​ನ ಸೆಷನ್ಸ್ ಕೋರ್ಟ್ ಸೋಮವಾರ ಸಮ್ಮತಿಸಿದೆ. ಜೊತೆಗೆ ರಾಹುಲ್ ಗಾಂಧಿ ಅವರಿಗೆ ನೀಡಲಾಗಿರುವ ಜಾಮೀನನ್ನು ಏಪ್ರಿಲ್ 13ರ ವರೆಗೆ ವಿಸ್ತರಣೆ ಮಾಡಿದೆ. ಮುಂದಿನ ವಿಚಾರಣೆಯನ್ನು ಮೇ 3ಕ್ಕೆ ನಿಗದಿಪಡಿಸಿದೆ.

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಇತ್ತೀಚೆಗೆ ತೀರ್ಪು ನೀಡಿದ್ದ ಸೂರತ್ ನ್ಯಾಯಾಲಯವು 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಅಲ್ಲದೆ ಮೇಲ್ಮನವಿ ಸಲ್ಲಿಕೆಗೆ ಕಾಲಾವಕಾಶ ನೀಡಿ, ಅಲ್ಲಿಯವರೆಗೆ ಜಾಮೀನು ಮಂಜೂರು ಮಾಡಲಾಗಿದೆ ಎಂದು ತಿಳಿಸಿತ್ತು. ಇದರ ಬೆನ್ನಲ್ಲೇ ರಾಹುಲ್ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಇದೀಗ ರಾಹುಲ್ ಗಾಂಧಿ ಅವರು ಸೂರತ್ ಸೆಷನ್ಸ್ ಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ರಾಹುಲ್‌ ಗಾಂಧಿ 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿದಂತೆ ದೋಷಿ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!