Tuesday, July 5, 2022

Latest Posts

ದೇಶದಲ್ಲಿ ಹಿಂದುಗಳು ಬಹುಸಂಖ್ಯಾತರಾಗಿರುವ ವರೆಗೆ ಮಾತ್ರ ಸಂವಿಧಾನ, ಕಾನೂನು ಬಗ್ಗೆ ಮಾತುಕತೆ: ಗುಜರಾತ್ ಡಿಸಿಎಂ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಭಾರತದಲ್ಲಿ ಹಿಂದುಗಳು ಬಹುಸಂಖ್ಯಾತರಾಗಿರುವ ವರೆಗೆ ಮಾತ್ರ ಸಂವಿಧಾನ, ಕಾನೂನುಗಳು ಮತ್ತು ಜಾತ್ಯತೀತೆಯ ಬಗ್ಗೆ ಮಾತುಕತೆಗಳು ನಡೆಯಲಿದೆ. ಹಿಂದುಗಳು ಅಲ್ಪಸಂಖ್ಯಾತರಾದರೆ ನ್ಯಾಯಾಲಯಗಳು, ಲೋಕಸಭೆ, ಸಂವಿಧಾನ, ಜಾತ್ಯತೀತತೆ ಯಾವುದೂ ಉಳಿಯುವುದಿಲ್ಲ ಎಂದು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಹೇಳಿದ್ದಾರೆ.
ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಗಾಂಧಿನಗರದಲ್ಲಿ ಆಯೋಜಿಸಿದ ಭಾರತ ಮಾತೆಯ ದೇವಾಲಯದ ಮೂರ್ತಿ ಪ್ರತಿಷ್ಠಾಪನೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ದೇಶದಲ್ಲಿ ಹಿಂದು ಬಹುಸಂಖ್ಯಾತರಾಗಿರುವ ವರೆಗೆ ಮಾತ್ರ ಸಂವಿಧಾನ, ಕಾನೂನು, ಜಾತ್ಯತೀತತೆ ಬಗ್ಗೆ ಮಾತನಾಡಬಹುದು. ಆದರೆ ಇನ್ನೊಂದು 1000 ದಿಂದ 2000 ವರ್ಷಗಳಲ್ಲಿ ಹಿಂದುಗಳ ಸಂಖ್ಯೆ ಕಡಿಮೆಯಾಗಿ ಇತರೆ ಜನರ ಸಂಖ್ಯೆಯು ಹೆಚ್ಚಾಗುತ್ತದೆ. ಆವಾಗ ಅಲ್ಲಿ ಯಾವುದೇ ನ್ಯಾಯಾಲಯ, ಲೋಕಸಭೆ, ಸಂವಿಧಾನ, ಜಾತ್ಯತೀತತೆ ವ್ಯವಸ್ಥೆ ಇರುವುದಿಲ್ಲ. ಎಲ್ಲವೂ ಗಾಳಿಯಲ್ಲಿ ಮಾಯವಾಗುತ್ತದೆ ಎಂದಿದ್ದಾರೆ.
‘ನಾನು ಮುಸ್ಲಿಂ, ಕ್ರಿಶ್ಚಿಯನ್ನರನ್ನು ಉದ್ದೇಶಿಸಿ ಮಾತನಾಡುತ್ತಿಲ್ಲ. ಏಕೆಂದರೆ ಅವರಲ್ಲೂ ಹೆಚ್ಚಿನವರು ದೇಶಪ್ರೇಮಿಗಳಾಗಿದ್ದಾರೆ. ನಾನು ಎಲ್ಲರ ಬಗ್ಗೆ ಮಾತನಾಡುವುದಿಲ್ಲ. ಲಕ್ಷಾಂತರ ಕ್ರಿಸ್ಟಿಯನ್ ಹಾಗೂ ಮುಸ್ಲಿಂಮರು ದೇಶಭಕ್ತರಾಗಿದ್ದಾರೆ. ಸಾವಿರಾರು ಮುಸ್ಲಿಂಮರು ಸೇನೆ ಹಾಗೂ ಗುಜರಾತ್ ಪೊಲೀಸ್‌ ಪಡೆಯಲ್ಲಿದ್ದಾರೆ. ಆದರೆ ದೇಶಭಕ್ತಿ ಹೊಂದಿಲ್ಲದವರ ಬಗ್ಗೆ ಹೇಳುತ್ತಿದ್ದೇನೆ ಎಂದು ನಿತಿನ್ ಪಟೇಲ್ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss