ಗುಜರಾತ್ ಚುನಾವಣೆ: ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ 12 ಬಿಜೆಪಿ ಮುಖಂಡರ ಸಸ್ಪೆಂಡ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಮತ್ತೆ ಅಧಿಕಾರ ಗಳಿಸಲು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಘಟಾನುಘಟಿ ನಾಯಕರುಗಳು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ.

ಇದರ ಮಧ್ಯೆ ಪಕ್ಷಕ್ಕೆಬಂಡಾಯ ಅಭ್ಯರ್ಥಿಗಳ ತಲೆನೋವು ಕಾಡುತ್ತಿದ್ದು, ಪಕ್ಷೇತರರಾಗಿ ಕಣಕ್ಕಿಳಿದಿರುವ 12 ಮಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಇವರುಗಳ ಪೈಕಿ 6 ಬಾರಿ ಆಯ್ಕೆಯಾಗಿರುವ ಶಾಸಕರುಗಳು ಸಹ ಇದ್ದಾರೆ.

ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಏಳು ಮಂದಿ ಬಂಡಾಯ ಬಿಜೆಪಿ ಮುಖಂಡರನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಎರಡನೇ ಹಂತದ ಚುನಾವಣೆಗಾಗಿ ನಾಮಪತ್ರ ಸಲ್ಲಿಸಿರುವ 12 ಮಂದಿಯನ್ನು ಸಸ್ಪೆಂಡ್ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!