ಗುಜರಾತ್‌ ಚುನಾವಣೆ: ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಗುಜರಾತ್‌ನಲ್ಲಿ ಚುನಾವಣೆಗೆ ಇನ್ನೇನ್ನು ಕೆಲವೇ ತಿಂಗಳು ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳು ಗೆಲುವು ತನ್ನದಾಗಿಸಿಕೊಳ್ಳಲು ರಣತಂತ್ರ ರೂಪಿಸುತ್ತಿದೆ.

ಇದೀಗ ಬಿಜೆಪಿ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಅವರನ್ನು ಸೇರಿಸಲಾಗಿದೆ.

ಗುಜರಾತ್ ಬಿಜೆಪಿ ಮುಖ್ಯಸ್ಥ ಸಿಆರ್ ಪಾಟೀಲ್, ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಕೇಂದ್ರ ಸಚಿವರಾದ ಅರ್ಜುನ್ ಮುಂಡಾ ಮತ್ತು ಸ್ಮೃತಿ ಇರಾನಿ ಕೂಡ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂನ ಹಿಮಂತ ಬಿಸ್ವಾ ಶರ್ಮಾ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೂಡ ಸ್ಟಾರ್ ಪ್ರಚಾರಕರಾಗಲಿದ್ದಾರೆ.

ಅದೇ ರೀತಿ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಮಾಜಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಅವರ ಹೆಸರನ್ನೂ ಸೇರಿಸಲಾಗಿದೆ. ಆದರೆ ಇವರಿಬ್ಬರೂ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ.

ಭೋಜ್‌ಪುರಿ ಗಾಯಕರು ಮತ್ತು ಪಕ್ಷದ ಸಂಸದರಾದ ಮನೋಜ್ ತಿವಾರಿ, ನಟ-ರಾಜಕಾರಣಿ ರವಿ ಕಿಶನ್ ಮತ್ತು ಗಾಯಕ-ರಾಜಕಾರಣಿ ದಿನೇಶ್ ಲಾಲ್ ಯಾದವ್ ಕೂಡ ಪಟ್ಟಿಯಲ್ಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!