ಗುಜರಾತ್ ಚುನಾವಣೆ: ನಿಶಾನ್​ ಶಾಲೆಯಲ್ಲಿ ಪ್ರಧಾನಿ ಮೋದಿ ಮತದಾನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಗುಜರಾತ್ ಚುನಾವಣೆಯ ಎರಡನೇ ಹಂತದ ಮತದಾನ ಡಿಸೆಂಬರ್ 5 ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ ಚಲಾಯಿಸಲಿದ್ದಾರೆ. 93 ಸ್ಥಾನಗಳಿಗೆ ನಡೆಯಲಿರುವ ಮತದಾನದಲ್ಲಿ ಸಬರಮತಿಯಿಂದ ಮೋದಿ ಮತದಾರರಾಗಿ ನೋಂದಣಿಯಾಗಿದ್ದಾರೆ.
ಇಲ್ಲಿನ ರಾನಿಪ್‌ನ ನಿಶಾನ್ ಶಾಲೆಯಲ್ಲಿರುವ ಮತಗಟ್ಟೆಯಲ್ಲಿ ಮತದಾನ ಮಾಡಲಿದ್ದು, ಇದಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ. ಮೊದಲ ಹಂತದಲ್ಲಿ ಸೌರಾಷ್ಟ್ರ, ಕಚ್ ಮತ್ತು ದಕ್ಷಿಣ ಗುಜರಾತ್‌ನ 19 ಜಿಲ್ಲೆಗಳ 89 ಸ್ಥಾನಗಳಿಗೆ ಮತದಾನ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!