ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು, ವಿವಿಧ ಪಕ್ಷಗಳಿಂದ ಗೆಲುವಿನ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ.
ಇಂದು ಪ್ರಚಾರ ಅಖಾಡಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಳಿದಿದ್ದು, ಕ್ರಿಕೆಟಿಗ ರವೀಂದ್ರ ಜಡೇಜಾ ಮತ್ತು ಅವರ ಪತ್ನಿ, ಬಿಜೆಪಿ ಅಭ್ಯರ್ಥಿ ರಿವಾಬಾ ಜಡೇಜಾ ಅವರನ್ನು ಜಾಮ್‌ನಗರ ವಿಮಾನ ನಿಲ್ದಾಣದಲ್ಲಿ ಭೇಟಿಯಾದರು.
ರಿವಾಬಾ ಜಡೇಜಾ ಗುಜರಾತ್ ಚುನಾವಣೆಯಲ್ಲಿ ಜಾಮ್‌ನಗರ ಉತ್ತರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಗೆಲುವಿನ ಹುಮ್ಮಸ್ಸಿನಲ್ಲಿ ಇದ್ದಾರೆ. 182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಎರಡು ಹಂತದ ಚುನಾವಣೆಗೆ ಬಿಜೆಪಿ ತನ್ನ 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.