ಗುಜರಾತ್​ ಚುನಾವಣೆಯಲ್ಲಿ ರಂಗೇರಿದ ಚುಟುವಟಿಕೆ: ಬಿಜೆಪಿ ಮೊದಲ ಪಟ್ಟಿ ರಿಲೀಸ್, ಜಡೇಜಾ ಪತ್ನಿಗೆ ಒಲಿದ ಟಿಕೆಟ್​!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್ ವಿಧಾನಸಭಾ ಚುನಾವಣೆಗೆ ರಾಜಕೀಯ ಚಟುವಟಿಕೆ ರಂಗೇರಿದ್ದು, ಇಂದು ಬಿಜೆಪಿ (BJP) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಮೊದಲ ಪಟ್ಟಿಯಲ್ಲಿ ಟೀಮ್​ ಇಂಡಿಯಾದ ಆಟಗಾರ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.

ಜಾಮ್​ನಗರ ಉತ್ತರ ವಿಧಾನಸಭಾ ಕ್ಷೇತ್ರದಿಂದ ರಿವಾಬಾ ಸ್ಪರ್ಧಿಸಲಿದ್ದಾರೆ. 2019ರಲ್ಲಿ ಬಿಜೆಪಿ ಪಕ್ಷ ಸೇರಿಕೊಂಡು, ಸಕ್ರೀಯ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದಾರೆ.

ಬಿಜೆಪಿಯಿಂದ ಸುಮಾರು 160 ಅಭ್ಯರ್ಥಿಗಳ ಹೆಸರು ಮತ್ತು ಸ್ಪರ್ಧಿಸುವ ಕ್ಷೇತ್ರಗಳ ಬಗ್ಗೆ ಮಾಹಿತಿ ಇರುವ ಪಟ್ಟಿಯನ್ನು ಕೇಂದ್ರ ಸಚಿವ ಭೂಪೇಂದ್ರ ಯಾದವ್​ ಬಿಡುಗಡೆ ಮಾಡಿದರು.

ಗುಜರಾತ್​ ಸಿಎಂ ಭೂಪೇಂದ್ರ ಪಟೇಲ್​ ಘಟ್ಲೋಡಿಯಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಮಾಜಿ ಸಿಎಂ ವಿಜಯ್​ ರೂಪಾಣಿ ಮತ್ತು ಪಕ್ಷದ ಹಿರಿಯ ನಾಯಕ ಭೂಪೇಂದ್ರಸಿನ್ಹ್​ ಚುಡಾಸಮಾ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿರುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ.

ಹಾಗೆಯೇ ಈ ವರ್ಷದ ಆರಂಭದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ ಪಾಟಿದಾರ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಅವರಿಗೂ ಸಹ ಬಿಜೆಪಿ ಅವಕಾಶ ಕಲ್ಪಿಸಿಕೊಟ್ಟಿದೆ.

ಡಿಸೆಂಬರ್​ 1 ಮತ್ತು 5ಕ್ಕೆ ಎರಡು ಹಂತಗಳಲ್ಲಿ ಗುಜರಾತ್​ನಲ್ಲಿ ಮತದಾನ ನಡೆಯಲಿದ್ದು, ಡಿ.8ಕ್ಕೆ ಫಲಿತಾಂಶ ಹೊರ ಬೀಳಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!