ಗುಜರಾತ್‌ ಚುನಾವಣೆ: ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸಿದ ಬಿಜೆಪಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಹು ನಿರೀಕ್ಷಿತ ಗುಜರಾತ್ ಚುನಾವಣೆಗೆ‌ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದರೆ ಭೂಪೇಂದ್ರ ಪಟೇಲ್ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆ ಎಂದು ಪಕ್ಷದ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಶಾ ಅವರ ತವರು ರಾಜ್ಯದಲ್ಲಿ ಸತತ ಏಳನೇ ಅವಧಿಯ ಮೇಲೆ ಕಣ್ಣಿಟ್ಟಿರುವ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಪಟೇಲ್ ಎಂದು ಷಾ ಹೇಳಿಕೆ ಸ್ಪಷ್ಟಪಡಿಸಿದೆ. ಗುಜರಾತ್ ನಲ್ಲಿ ಬಿಜೆಪಿ ಬಹುಮತ ಪಡೆದರೆ ಭೂಪೇಂದ್ರ ಪಟೇಲ್ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಶಾ ಹೇಳಿದ್ದಾರೆ.

2021 ರ ಸೆಪ್ಟೆಂಬರ್‌ನಲ್ಲಿ ವಿಜಯ್ ರೂಪಾನಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸಿ ಅವರ ಸ್ಥಾನಕ್ಕೆ ಭೂಪೇಂದ್ರ ಪಟೇಲ್‌ ಅವರನ್ನು ಮುಖ್ಯಮಂತ್ರಿಯನ್ನಾಗಿಸಲಾಗಿತ್ತು. ಇದು ಅನೇಕರನ್ನು ಆಶ್ಚರ್ಯಗೊಳಿಸಿತ್ತು.

ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿ ಇಸುದನ್ ಗಧ್ವಿ ಅವರು ಖಂಭಾಲಿಯಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ. ಎಎಪಿಯ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಈ ಕುರಿತು ಟ್ವಿಟ್ಟರ್‌ನಲ್ಲಿ ಘೋಷಣೆ ಮಾಡಿ “ರೈತರು, ನಿರುದ್ಯೋಗಿ ಯುವಕರು, ಮಹಿಳೆಯರು, ಉದ್ಯಮಿಗಳಿಗಾಗಿ ವರ್ಷಗಳ ಕಾಲ ಧ್ವನಿ ಎತ್ತಿರುವ ಇಸುದನ್ ಗಾಧ್ವಿ ಅವರು ಜಾಮ್ ಖಂಭಾಲಿಯಾದಿಂದ ಸ್ಪರ್ಧಿಸಲಿದ್ದಾರೆ! ಗುಜರಾತ್ ಶ್ರೀಕೃಷ್ಣನ ಪುಣ್ಯಭೂಮಿಯಿಂದ ಹೊಸ ಮತ್ತು ಒಳ್ಳೆಯ ಮುಖ್ಯಮಂತ್ರಿಯನ್ನು ಪಡೆಯುತ್ತದೆ” ಎಂದು ಹೇಳಿದ್ದರು.

ಚುನಾವಣೆಗೆ ಸಿಎಂ ಮುಖವನ್ನು ಘೋಷಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ.

ಗುಜರಾತ್‌ನ ಒಟ್ಟು 182 ಸ್ಥಾನಗಳಿಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮತಗಳ ಎಣಿಕೆ ಡಿಸೆಂಬರ್ 8 ರಂದು ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!