ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೋಮವಾರ ರಾತ್ರಿ ಗುಜರಾತ್‌ನ ವಲ್ಸಾದ್ ಜಿಲ್ಲೆಯ ಫಾರ್ಮಾ ಕಂಪನಿಯೊಂದರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.
ಅಧಿಕಾರಿಗಳ ಪ್ರಕಾರ, ವಲ್ಸಾದ್ ಜಿಲ್ಲೆಯ ಸರಿಗಾಮ್ ಜಿಐಡಿಸಿ ಕೆಮಿಕಲ್ ವಲಯದಲ್ಲಿರುವ ವ್ಯಾನ್ ಪೆಟ್ರೋಕೆಮ್ ಫಾರ್ಮಾ ಕಂಪನಿಯಲ್ಲಿ ಹಠಾತ್ ಸ್ಫೋಟ ಸಂಭವಿಸಿದೆ. ಘಟನೆಯ ವೇಳೆ ಕಟ್ಟಡದ ಒಂದು ಭಾಗ ಕುಸಿದಿದೆ.
ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು. ಘಟನೆಯ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ವಾಹನಗಳಿಗೆ ಮಾಹಿತಿ ನೀಡಲಾದರೂ ಸ್ಫೋಟಗೊಂಡ ರಾಸಾಯನಿಕ ಯಾವುದೆಂದು ತಿಳಿಯದ ಕಾರಣ ಬೆಂಕಿ ನಂದಿಸಲು ಕಷ್ಟವಾಗಿದೆ.
ಬೆಂಕಿ ಹೊತ್ತಿಕೊಂಡಿದೆ ಎಂದು ನಮಗೆ ಕರೆ ಬಂತು ಇಲ್ಲಿಯವರೆಗೆ ಎರಡು ಶವಗಳು ಪತ್ತೆಯಾಗಿವೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾನು ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಇಲ್ಲಿಗೆ ತಲುಪಿದಾಗ ಯಾವುದೇ ಭದ್ರತಾ ಸಿಬ್ಬಂದಿ ಇರಲಿಲ್ಲ. ನಾವು ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಸಾಧ್ಯವಾಗಲಿಲ್ಲ, ಅದರಲ್ಲಿರುವ ರಾಸಾಯನಿಕ ಯಾವುದೆಂದು ಖಚಿತವಾಗಿಲ್ಲ ಎಂದು ಅಗ್ನಿಶಾಮಕ ದಳದ ಅಧಿಕಾರಿ ಸರಿಗಂ ರಾಹುಲ್ ಮುರಾರಿ ಹೇಳಿದ್ದಾರೆ.