ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಡೀ ದೇಶದ ಗಮನಸೆಳೆದಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ಇದರ ಜೊತೆಗೆ ಆರು ವಿಧಾನಸಭಾ ಕ್ಷೇತ್ರಗಳು ಮತ್ತು ಒಂದು ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಕೂಡ ಹೊರಬೀಳಲಿದೆ.
ಈಗಾಗಲೇ ಮತ ಎಣಿಕೆ ಆರಂಭವಾಗಿದೆ. ಎರಡು ವಿಧಾನಸಭೆಗಳು ಹಾಗೂ ಏಳು ಉಪಚುನಾವಣೆಗಳ ಮತ ಎಣಿಕೆಗೆ ಸಂಬಂಧಿಸಿದಂತೆ ಒಟ್ಟಾರೆ 116 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಒಬ್ಬ ಮತ ಎಣಿಕೆ ವೀಕ್ಷಕರನ್ನು ನಿಯೋಜಿಸಲಾಗಿದೆ. ಹಿಮಾಚಲ ಪ್ರದೇಶ ಹಾಗೂ ಗುಜರಾತ್‌ನಲ್ಲಿ ತಲಾ ಇಬ್ಬರು ವಿಶೇಷ ವೀಕ್ಷಕರನ್ನು ನಿಯೋಜಿಸಲಾಗಿದೆ.