ಕಲಬೆರಕೆ ಮದ್ಯ ಸೇವಿಸಿ 25 ಮಂದಿ ಸಾವು: 40 ಜನರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಲಬೆರಕೆ ಮದ್ಯ ಸೇವಿಸಿ 25 ಮಂದಿ ಪ್ರಾಣ ಕಳೆದುಕೊಂಡಿದ್ದು, ಇನ್ನೂ 40 ಜನರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಮಾನುಷ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪೊಲೀಸರ ಪ್ರಕಾರ, ಗುಜರಾತ್‌ನ ಬೋತದ್ ಜಿಲ್ಲೆಯಲ್ಲಿ ಸ್ಥಳೀಯರು ಭಾನುವಾರ ಕಲಬೆರಕೆ ಮದ್ಯ ಸೇವನೆ ಮಾಡಿದ್ದಾರೆ.  ಸೋಮವಾರ ಬೆಳಗಿನ ವೇಳೆಗೆ ಅವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾದ್ದರಿಂದ ಕುಟುಂಬ ಸದಸ್ಯರು ಅವರನ್ನು ಹತ್ತಿರದ ಭಾವನಗರ, ಬೋತದ್ ಮತ್ತು ಬರ್ವಾಲಾ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.

Gujarat Hooch Tragedy: Death Toll Rises To 25, With 40 Still Critical After Consuming Spurious Country-Made Liquor

ವಿವಿಧ ಊರುಗಳಲ್ಲಿ ಏಕಕಾಲಕ್ಕೆ ಅಪಾರ ಸಂಖ್ಯೆಯ ಜನ ಸ್ಥಳೀಯ ಆಸ್ಪತ್ರೆಗೆ ದಾಖಲಾದಾಗ ವಿಷಯ ಬೆಳಕಿಗೆ ಬಂದಿದೆ. ಎಲ್ಲರೂ ಒಂದೇ ರೀತಿಯ ಮದ್ಯ ಸೇವಿಸಿದ್ದರಿಂದ ಈ ಪರಿಸ್ಥಿತಿ ಉಂಟಾಗಿದೆ ಎಂಬುದನ್ನು ಅಧಿಕಾರಿಗಳು ಕಂಡುಕೊಂಡಿದ್ದಾರೆ. ಪೊಲೀಸರ ಅಂದಾಜಿನ ಪ್ರಕಾರ ಸ್ಥಳೀಯ ವ್ಯಾಪಾರಿಯೊಬ್ಬರು ಈ ಮದ್ಯವನ್ನು ಅಕ್ರಮವಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದು, ಸಂತ್ರಸ್ತರು  ಸೇವಿಸಿದ ಆಲ್ಕೋಹಾಲ್‌ನಲ್ಲಿ ಹೆಚ್ಚಿನ ಮೀಥೈಲ್ ಅಂಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮದ್ಯ ಸೇವಿಸಿ ಇದುವರೆಗೆ ಸುಮಾರು 25 ಮಂದಿ ಸಾವನ್ನಪ್ಪಿದ್ದು, 40 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ  ವರದಿಯಾಗಿದೆ. ಕಲಬೆರಕೆ ಮದ್ಯ ತಯಾರಿಸುತ್ತಿದ್ದ ಮೂವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಪ್ರಕರಣದ ತನಿಖೆಗಾಗಿ ಅಧಿಕಾರಿಗಳು ವಿಶೇಷ ಪೊಲೀಸ್ ತಂಡವನ್ನು ರಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!