ಹೊಸದಿಗಂತ ಡಿಜಿಟಲ್ ಡೆಸ್ಕ್ :
ಐಪಿಎಲ್ ಇಂದಿನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಗುಜರಾತ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ.
ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಆಯ್ಕೆಗೆ ಅಲಭ್ಯರಾಗಿದ್ದು, ಪಾಂಡ್ಯ ಬದಲಿಗೆ ಕನ್ನಡಿಗ ಅಭಿನವ್ ಮನೋಹರ್ ತಂಡ ಕೂಡಿಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ರಶೀದ್ ಖಾನ್ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಇನ್ನು ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಟಿಮ್ ಸೌಥಿ ಬದಲಿಗೆ ಲಾಕಿ ಫರ್ಗ್ಯೂಸನ್, ಮನ್ದೀಪ್ ಸಿಂಗ್ ಬದಲಿಗೆ ಎನ್ ಜಗದೀಶನ್ ಕೆಕೆಆರ್ ತಂಡ ಕೂಡಿಕೊಂಡಿದ್ದಾರೆ.
ಗುಜರಾತ್ ಟೈಟಾನ್ಸ್: ವೃದ್ದಿಮಾನ್ ಸಾಹ, ಶುಭ್‌ಮನ್ ಗಿಲ್, ಸಾಯಿ ಸುದರ್ಶನ್, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್(ನಾಯಕ), ಅಲ್ಜೆರಿ ಜೋಸೆಫ್, ಯಶ್ ದಯಾಳ್, ಮೊಹಮ್ಮದ್ ಶಮಿ.
ಕೆಕೆಆರ್: ರೆಹಮನುಲ್ಲಾ ಗುರ್ಬಾಜ್, ಎನ್ ಜಗದೀಶನ್, ನಿತೀಶ್ ರಾಣಾ(ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಶಾರ್ದೂಲ್ ಠಾಕೂರ್, ಸುನಿಲ್ ನರೇನ್, ಉಮೇಶ್ ಯಾದವ್, ಸುಯಾಶ್ ಶರ್ಮಾ, ಲಾಕಿ ಫರ್ಗ್ಯೂಸನ್, ವರುಣ್ ಚಕ್ರವರ್ತಿ.