Tuesday, October 3, 2023

Latest Posts

ಗುಜರಾತ್‌-ಮೇಘಾಲಯ: ರಾಹುಲ್ ಗಾಂಧಿಯಿಂದ ಭಾರತ್ ಜೋಡೋ ಯಾತ್ರೆ ಪಾರ್ಟ್-2!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ನಡೆಸಿದ್ದು, ಇದೀಗ ಗುಜರಾತ್‌ನಿಂದ ಮೇಘಾಲಯದವರೆಗೆ ಎರಡನೇ ಹಂತದ ಭಾರತ್ ಜೋಡೋ ಯಾತ್ರೆ ನಡೆಸಲಿದ್ದಾರೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಮಂಗಳವಾರ ಖಚಿತಪಡಿಸಿದ್ದಾರೆ.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ಸುಮಾರು 4,000 ಕಿ.ಮೀ. ಪಾದಯಾತ್ರೆ ನಡೆಸಿದ್ದರು. 2022 ಸೆಪ್ಟೆಂಬರ್ 7ರಂದು ಆರಂಭವಾದ ಯಾತ್ರೆಯು ಜನವರಿ 30ರಂದು ಶ್ರೀನಗರದಲ್ಲಿ ಮುಕ್ತಾಯಗೊಂಡಿತ್ತು. 130 ದಿನಗಳ ಕಾಲ 12 ರಾಜ್ಯಗಳಲ್ಲಿ ಯಾತ್ರೆ ಸಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!