ಗುಜರಾತ್ ಗಲಭೆ ಪ್ರಕರಣ: ಸುಪ್ರೀಂಕೋರ್ಟ್ ನಿಂದ ತೀಸ್ತಾ ಸೆಟಲ್ವಾಡ್‌ಗೆ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್ ಗಲಭೆ ಪ್ರಕರಣದಲ್ಲಿ ಸಾಮಾಜಿಕ ಹೋರಾಟರಾರ್ತಿ ತೀಸ್ತಾ ಸೆಟಲ್ವಾಡ್‌ಗೆ(Teesta Setalvad) ಸುಪ್ರೀಂಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.

ಈ ವೇಳೆ ಜಾಮೀನು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್(Supreme Court) ರದ್ದುಗೊಳಿಸಿದ್ದು, ಜಾಮೀನು ಅವಧಿಯಲ್ಲಿ ಸೆಟಲ್ವಾಡ್ ಅವರ ಪಾಸ್‌ಪೋರ್ಟ್ ವಿಚಾರಣಾ ನ್ಯಾಯಾಲಯದಲ್ಲಿ ಇರಿಸುವಂತೆ ನ್ಯಾಯಾಲಯ ಸೂಚಿಸಿದೆ.

ಈ ವೇಳೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಪ್ರಯತ್ನವನ್ನು ಮಾಡುವುದಿಲ್ಲ ಮತ್ತು ಗುಜರಾತ್‌ನಲ್ಲಿರುವ ಸಾಕ್ಷಿಗಳಿಂದ ದೂರ ಉಳಿಯಬೇಕು ಎಂಬ ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ. ಒಂದು ವೇಳೆ ಆಕೆ ಈ ಷರತ್ತನ್ನು ಉಲ್ಲಂಘಿಸಿರುವುದು ಕಂಡುಬಂದರೆ, ಗುಜರಾತ್ ಪೊಲೀಸರಿಗೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವ ಮೂಲಕ ಜಾಮೀನು ರದ್ದುಗೊಳಿಸಲು ಕೋರ್ಟ್ ಅನುಮತಿ ನೀಡಿದೆ.

ಕಳೆದ ವರ್ಷ ಸೆಪ್ಟೆಂಬರ್ 2 ರಂದು, ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದು, ಆಕೆ ಮಹಿಳೆ ಮತ್ತು ಹೆಚ್ಚಿನ ಸಾಕ್ಷ್ಯಾಧಾರಗಳು 2002 ರ ಪ್ರಕರಣಕ್ಕೆ ಸಂಬಂಧಿಸಿವೆ. ಈ ಷರತ್ತುಗಳು ಇಂದಿಗೂ ಪ್ರಸ್ತುತವಾಗಿರುವ ಕಾರಣ ಅವರಿಗೆ ಜಾಮೀನು ನೀಡಲು ನಿರ್ಧರಿಸಿದೆ.

ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ಪೀಠ ಸೆಪ್ಟೆಂಬರ್ 2, 2022 ರ ಸುಪ್ರೀಂ ಕೋರ್ಟ್‌ನ ತೀರ್ಪಿಗೆ ಅನುಗುಣವಾಗಿ ಸೆಟಲ್ವಾಡ್ ಜಾಮೀನು ಮುಂದುವರಿಸುವುದಾಗಿ ಹೇಳಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದ ನಂತರ ಈ ಪ್ರಕರಣದಲ್ಲಿ ಸೆಟಲ್ವಾಡ್ ಅವರನ್ನು ಪೊಲೀಸರು ಒಮ್ಮೆಯೂ ಪ್ರಶ್ನಿಸಿಲ್ಲ ಎಂದು ತ್ರಿಸದಸ್ಯ ಪೀಠ ಹೇಳಿದೆ.

ಪ್ರಕರಣದಲ್ಲಿ ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಸಾಕ್ಷ್ಯಾಧಾರಗಳು ಬಹುತೇಕ ದಾಖಲೆಗಳು ಈಗಾಗಲೇ ತನಿಖಾ ಸಂಸ್ಥೆಯ ಕೈಯಲ್ಲಿವೆ ಎಂದುಹೇಳಿದೆ. ಸಾಕ್ಷ್ಯಗಳು ಹಾನಿಯಾಗುತ್ತದೆ ಎಂಬ ಯಾವುದೇ ಭಯವಿಲ್ಲ, ಇನ್ನು ಮುಂದೆ ಸೆಟಲ್ವಾಡ್ ಅವರ ಬಂಧನದ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಕಳೆದ ವರ್ಷ ಜೂನ್ 25 ರಂದು ಗುಜರಾತ್ ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್.ಬಿ.ಶ್ರೀಕುಮಾರ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರೊಂದಿಗೆ ಅಹಮದಾಬಾದ್ ಕ್ರೈಂ ಬ್ರಾಂಚ್ ಪೊಲೀಸರು ದಾಖಲಿಸಿದ ಪ್ರಕರಣದಲ್ಲಿ ಗೋದ್ರಾ ಗಲಭೆಯ ನಂತರ ಅಮಾಯಕರನ್ನು ಇದರಲ್ಲಿ ಸಿಲುಕಿಸಲು ಸಾಕ್ಷ್ಯವನ್ನು ಸೃಷ್ಟಿಸಿದ ಆರೋಪದಲ್ಲಿ ಸೆಟಲ್ವಾಡ್ ಅವರನ್ನು ಬಂಧಿಸಲಾಯಿತು.

ಅಹಮದಾಬಾದ್ ಸೆಷನ್ಸ್ ನ್ಯಾಯಾಲಯವು ಜುಲೈ 30, 2022 ರಂದು ಸೆಟಲ್ವಾಡ್ ಮತ್ತು ಶ್ರೀಕುಮಾರ್ ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿತ್ತು. ಸೆಟಲ್ವಾಡ್ ಅವರ ಜಾಮೀನು ಅರ್ಜಿಯ ಕುರಿತು ಹೈಕೋರ್ಟ್ ಆಗಸ್ಟ್ 3, 2022 ರಂದು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಸೆಪ್ಟೆಂಬರ್ 19 ರಂದು ವಿಚಾರಣೆಯನ್ನು ನಿಗದಿಪಡಿಸಿತ್ತು.2002ರ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಫೋರ್ಜರಿ, ನಕಲಿ ದಾಖಲೆ, ಗಾಯಗೊಳಿಸುವ ಉದ್ದೇಶದಿಂದ ಅಪರಾಧಗಳ ಸುಳ್ಳು ಆರೋಪಗಳನ್ನು ಹೊರಿಸಿ, ಪಿತೂರಿ ಮಾಡಿದ ಆರೋಪ ಸೆಟಲ್ವಾಡ್ ಮೇಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!