Tuesday, June 28, 2022

Latest Posts

ಗುಜರಾತ್‌ ಗಲಭೆ : ಮೋದಿಗೆ ಕ್ಲೀನ್‌ ಚೀಟ್‌ ಎತ್ತಿ ಹಿಡಿದ ಸುಪ್ರಿಂ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸಲ್ಲಿಸಲಾಗಿದ್ದ 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಗುಜರಾತ್ ಗಲಭೆಗೆ ಸಂಬಂಧಿಸಿ ಮಾಜಿ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸಲ್ಲಿಸಿರುವ ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯವು ಶುಕ್ರವಾರ ವಜಾ ಮಾಡಿದೆ.

ಫೆ.28, 2002ರಲ್ಲಿ ಗುಜರಾತ್‌ನಲ್ಲಿ ನಡೆದ ಹತ್ಯಾಕಾಂಡದಲ್ಲಿ ಜಾಕಿಯಾ ಜಫ್ರಿ ಪತಿ ಹಾಗೂ ಮಾಜಿ ಕಾಂಗ್ರೆಸ್ ಸಂಸದ ಇಶಾನ್ ಜಫ್ರಿ ಸೇರಿದಂತೆ 35 ಮಂದಿ ಸಾವನ್ನಪ್ಪಿದ್ದರು. ಈ ಸಂಬಂಧ ಸಿಬಿಐನ ಮಾಜಿ ನಿರ್ದೇಶಕ ಆರ್. ಕೆ. ರಾಘವನ್ ನೇತೃತ್ವದ ವಿಶೇಷ ತನಿಖಾ ತಂಡ ತನಿಖೆ ನಡೆಸಿತ್ತು. 2011, ಸೆ.12ರಂದು ಸುಪ್ರಿಂ ಕೋರ್ಟ್‌ನ ಮೂವರು ಸದಸ್ಯರ ವಿಸ್ತೃತ ನ್ಯಾಯಪೀಠ, ವಿಶೇಷ ತನಿಖಾ ತಂಡದ ಅಂತಿಮ ವರದಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಸ್ತಾಂತರಿಸುವಂತೆ ಆದೇಶ ನೀಡಿತ್ತು.

ವಿಚಾರಣೆ ನಡೆಸಿದ್ದ ಅಹಮದಾಬಾದ್ ವಿಚಾರಣಾ ನ್ಯಾಯಾಲಯ ತನಿಖಾ ತಂಡ ಸಲ್ಲಿಸಿದ್ದ ಮೋದಿ ಸೇರಿದಂತೆ ಹಲವರಿಗೆ ಕ್ಲೀನ್ ಚಿಟ್ ನೀಡಿದ ವರದಿಯನ್ನು 2012, ಮಾ.13ರಂದು ಎತ್ತಿ ಹಿಡಿದಿತ್ತು.

ಆದರೆ ಇದನ್ನು ಪ್ರಶ್ನಿಸಿ ಜಾಕಿಯಾ ಜಾಫ್ರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಜಾಫ್ರಿಯವರ ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯವು ತಳ್ಳಿಹಾಕಿದೆ. ಈ ಮೂಲಕ ಪ್ರಧಾನಿ ಮೋದಿಗೆ ಸರ್ವೋಚ್ಛ ನ್ಯಾಯಾಲಯದಲ್ಲಿ ಕೂಡ ಗೆಲುವು ಸಿಕ್ಕಂತಾಗಿದೆ.‌

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss