ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೋವಿಡ್ ಸೋಂಕಿತರ ಪ್ರಮಾಣ ಸ್ವಲ್ಪ ತಗ್ಗಿದ್ದು, ಈ ಹಿನ್ನೆಲೆ ಗುಜರಾತ್ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
9 ರಿಂದ 11ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕವಾಗಿ ಶೇ.50ರಷ್ಟು ಆಸನ ವ್ಯವಸ್ಥೆಯೊಂದಿಗೆ ಜುಲೈ 26ರಿಂದ ಶಾಲೆ ತೆರೆಯಲು ಅನುಮತಿ ನೀಡಿದೆ.
ಈ ಮಹತ್ವ ನಿರ್ಧಾರವನ್ನು ರಾಜ್ಯ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವುದಾಗಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಹೇಳಿದ್ದಾರೆ.
ಕೊರೋನಾ ನಿಯಮಗಳ ಅನುಸಾರ ಶಾಲೆಗಳನ್ನು ತೆರೆಯಲಾಗಿದ್ದು, ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ತರಗತಿಗೆ ಹಾಜರಾಗುವುದು ಕಡ್ಡಾಯವಾಗಿಲ್ಲವಾದ್ದರಿಂದ ಆನ್ಲೈನ್ ತರಗತಿ ಎಂದಿನಂತೆ ಮುಂದುವರೆಯಲಿದೆ
ಇನ್ನು ದೈಹಿಕ ಶಿಕ್ಷಣ ತರಗತಿಗೆ ಹಾಜರಾಗಲು ಸಿದ್ಧರಿರುವ ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ಪಡೆಯಬೇಕು ಎಂದು ಸರ್ಕಾರ ಹೇಳಿದೆ.