ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 11 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 243 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನಟ್ಟಿದ ಗುಜರಾತ್ ನಿಗದಿತ ಓವರ್‌ಗಳಲ್ಲಿ 232 ರನ್ ಗಳಿಸಿ ತನ್ನ ತವರಿನಲ್ಲೇ ಮೊಟ್ಟ ಮೊದಲ ಮ್ಯಾಚ್ ಕಳೆದುಕೊಂಡಿದೆ.