ಹೊಸದಿಗಂತ ಡಿಜಿಟಲ್ ಡೆಸ್ಕ್:
ಡೇವಿಡ್ ಮಿಲ್ಲರ್, ಸಾಯಿ ಸುದರ್ಶನ್ ಹಾಗೂ ಶುಭಮನ್ ಗಿಲ್ (Shubman Gill) ಬ್ಯಾಟಿಂಗ್ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ (Sunrisers Hyderabad) ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡವು 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತ್ತು.
163 ರನ್‌ಗಳ ಗುರಿ ಬೆನ್ನತ್ತಿದ ಟೈಟಾನ್ಸ್ (Gujarat Titans) ಪಡೆ 19.1 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿ ಗೆಲುವು ಸಾಧಿಸಿತು.