ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ ವಡೋದರಾ ಜಿಲ್ಲೆಯ ಪಾದರಾ ನಗರದಲ್ಲಿ ಮಹಿಸಾಗರ್ ದಲ್ಲಿ ಸಂಭವಿಸಿದ್ದ ಸೇತುವೆ ಕುಸಿತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿದೆ.
ಸೇತುವೆಯಿಂದ ಬಿದ್ದು ಗಾಯಗೊಂಡು ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದ ಐದು ಮಂದಿಯ ಪೈಕಿ ದಹೆವಾನ್ ಗ್ರಾಮದ ನಿವಾಸಿ ನರೇಂದ್ರ ಸಿಂಗ್ ಪರ್ಮಾರ್ (45) ಮೃತಪಟ್ಟಿದ್ದಾರೆ.
ಸೇತುವೆ ಕುಸಿತಕ್ಕೆ ಸಂಬಂಧಿಸಿದಂತೆ ರಾಜ್ಯ ರಸ್ತೆ ಹಾಗೂ ಕಟ್ಟಡ ನಿರ್ಮಾಣಗಳ ವಿಭಾಗದ ಅಧಿಕಾರಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದ್ದು, 30 ದಿನಗಳ ಒಳಗಾಗಿ ವರದಿ ನೀಡುವಂತೆ ಸೂಚಿಸಲಾಗಿದೆ. ಸೇತುವೆಯ ಜೋಡಣಾ ಸ್ತಂಭದಲ್ಲಿ ಉಂಟಾದ ಒತ್ತಡದಿಂದ ಮುರಿದುಬಿದ್ದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಸಚಿವ ಋಷಿಕೇಶ್ ಪಟೇಲ್ ತಿಳಿಸಿದರು.