ಮೋದಿ ತವರು ರಾಜ್ಯದ ಚುನಾವಣೆಗೆ ದಿನಾಂಕ ಘೋಷಣೆ: ಗುಜರಾತ್‌ನಲ್ಲಿ ಡಿ.1, 5ಕ್ಕೆ ಎರಡು ಹಂತಗಳ ಮತದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಪ್ರಧಾನಿ ನರೇಂದ್ರ ಮೋದಿ ತವರು ಗುಜರಾತ್‌ ವಿಧಾನಸಭೆ ಚುನಾವಣೆಯು ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ನಡೆಯಲಿದೆ ಎಂದು ಚುನಾವಣಾ ಆಯೋಗ ಇಂದು ಪ್ರಕಟಿಸಿದೆ.
ಡಿಸೆಂಬರ್ 8 ರಂದು ಹಿಮಾಚಲ ಪ್ರದೇಶದ ಚುನಾವಣೆಯ ಜೊತೆಗೆ ಈ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳಲಿದೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ 2 ಹಂತದಲ್ಲಿ ಚುನಾವನೆ ನಡೆಯಲಿದೆ ಎಂದು ಘೋಷಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲು ನವೆಂಬರ್ 14 ಕೊನೆಯ ದಿನವಾಗಿದೆ. ನಾಮಪತ್ರ ಹಿಂಪಡೆಯಲು ನವೆಂಬರ್ 17 ಕೊನೆಯ ದಿನವಾಗಿದೆ. ಮೊದಲ ಹಂತದಲ್ಲಿ 89 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಎರಡನೇ ಹಂತದಲ್ಲಿ 93 ಸ್ಥಾನಗಳಿಗೆ ಮತದಾನ ನಡೆಯಲಿದೆ.
ಇವಿಎಂ ಟ್ಯಾಂಪರಿಂಗ್ ಆರೋಪಕ್ಕೆ ಮುಖ್ಯ ಚುನಾವಣಾ ಆಯುಕ್ತರು ಪ್ರತಿಕ್ರಿಯೆ ನೀಡಿದ್ದಾರೆ. “ಕ್ರಿಯೆಗಳು ಮತ್ತು ಫಲಿತಾಂಶಗಳು ಪದಗಳಿಗಿಂತ ಜೋರಾಗಿ ಮಾತನಾಡುತ್ತವೆ. ಆಯೋಗವನ್ನು ಟೀಕಿಸುವ ಪಕ್ಷಗಳು ಕೆಲವೊಮ್ಮೆ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶಗಳನ್ನು ಪಡೆದಿವೆ. ಕೆಲವರು ಇವಿಎಂಗಳನ್ನು ಪ್ರಶ್ನಿಸಿದ್ದಾರೆ, ಆದರೆ ಅದೇ ಇವಿಎಂಗಳ ಮೂಲಕ ಚುನಾವಣೆಯಲ್ಲಿ ಗೆದ್ದಾಗ ಅವರು ಮೌನವಾಗಿರುತ್ತಾರೆ” ಎಂದು ಅವರು ಹೇಳಿದ್ದಾರೆ.
2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 182 ಸ್ಥಾನಗಳ ಪೈಕಿ 99 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೇರಿತ್ತು.ಈ ಬಾರಿ ಗುಜರಾತ್ ರಾಜಕೀಯದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷದ (ಎಎಪಿ) ಪ್ರವೇಶದೊಂದಿಗೆ ತ್ರಿಕೋನ ಹೋರಾಟವಾಗಿ ಹೊರಹೊಮ್ಮಿದ್ದು, ರೋಚಕ ಚುನಾವಣಾ ಸ್ಪರ್ಧೆಗೆ ಸಿದ್ಧವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!