Tuesday, July 5, 2022

Latest Posts

ಪಂಜಾಬ್ ವಿರುದ್ಧ ಟಾಸ್ ಗೆದ್ದ ಗುಜರಾತ್: ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಂಜಾಬ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟನ್ಸ್ ತಂಡ ಟಾಸ್ ಗೆದ್ದು, ಬ್ಯಾಟಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿದೆ.
ಹಾರ್ದಿಕ್ ಪಡೆ ಟೂರ್ನಿಯಲ್ಲಿ ಆಡಿರುವ 9 ಪಂದ್ಯಗಳಲ್ಲಿ 8ರಲ್ಲಿ ಗೆಲುವು ಸಾಧಿಸಿದೆ. ಇಂದಿನ ಪಂದ್ಯದಲ್ಲಿ ಗೆದ್ದರೆ ಪ್ಲೇ ಆಫ್​ ಪ್ರವೇಶಿಸಿದ ಮೊದಲ ತಂಡ ಎನಿಸಿಕೊಳ್ಳಲಿದೆ. ಇತ್ತ 9 ಪಂದ್ಯಗಳಲ್ಲಿ 4 ಗೆಲುವು ಮತ್ತು 5 ಸೋಲು ಕಂಡಿರುವ ಪಂಜಾಬ್​ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ.

ಪಂಜಾಬ್ ಕಿಂಗ್ಸ್ :  ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಜಾನಿ ಬೈರ್‌ಸ್ಟೋ, ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೀ), ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್, ಸಂದೀಪ್ ಶರ್ಮಾ

ಗುಜರಾತ್ ಟೈಟಾನ್ಸ್ : ವೃದ್ಧಿಮಾನ್ ಸಹಾ(ವಿಕೀ), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss