ಗುಜರಾತ್‌ ಯುವ ಮೋರ್ಚಾ ಕಾರ್ಯಕರ್ತನ ಮೇಲೆ ಆಪ್‌ ಕಾರ್ಯಕರ್ತನಿಂದ ಹಲ್ಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಗುಜರಾತ್‌ನ ಗೋಮ್ತಿಪುರದಲ್ಲಿ ಬಿಜೆಪಿಯ ಯುವ ಮೋರ್ಚಾ ಕಾರ್ಯಕರ್ತನ ಮೇಲೆ ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತ ಹಲ್ಲೆ ಮಾಡಿದ ಘಟನೆ ನಡೆದಿದೆ ಎಂದು ಮೂಲಗಳು ವರದಿ ಮಾಡಿವೆ. ಯುವ ಮೋರ್ಚಾದ ಗೋಮ್ತಿಪುರ ವಾರ್ಡ್ ಮುಖ್ಯಸ್ಥ ಪವನ್ ತೋಮರ್ ಮತ್ತು ಎಎಪಿ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆದ ನಂತರ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.

ಪವನ್ ತೋಮರ್ ಅವರನ್ನು ಶಾರದಾಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗೋಮತಿಪುರ ಪೊಲೀಸರು ಕೊಲೆ ಯತ್ನ, ಗಲಭೆಗೆ ಶಿಕ್ಷೆ ಮತ್ತು ಕಾನೂನುಬಾಹಿರ ಸಭೆ ಆರೋಪದಡಿ ಆರು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಮತ್ತು ಅವರ ಪತ್ತೆಗೆ ಪ್ರಯತ್ನಗಳು ನಡೆಯುತ್ತಿವೆ.

ಮಂಗಳವಾರ ಮಧ್ಯಾಹ್ನ ಗೊಂಮ್ತಿಪುರದ ಮೋಹನ್‌ಲಾಲ್ ಚಲ್ಲಿಯಲ್ಲಿ ಪವನ್ ತೋಮರ್ ಮತ್ತು ಇತರ ಬಿಜೆಪಿ ಕಾರ್ಯಕರ್ತರು ಚರ್ಚೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ಅದೇ ಸಮಯದಲ್ಲಿ, ಎಎಪಿ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದರು ಮತ್ತು ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತು ಮತ್ತು ಕೋಪದ ಭರದಲ್ಲಿ, ಎಎಪಿ ಕಾರ್ಯಕರ್ತ ಸಾಹಿಲ್, ಪವನ್ ತೋಮರ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಬಿಜೆಪಿ ಗುಜರಾತ್‌ನ ಮಾಧ್ಯಮ ವಿಭಾಗವು ಘಟನೆಯ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು ಇದನ್ನು ‘ನಾಚಿಕೆಗೇಡು’ ಎಂದು ಬಣ್ಣಿಸಿದೆ, ಆಪ್ ರಾಜ್ಯದಲ್ಲಿ ಕೋಮು ಶಾಂತಿಯನ್ನು ಕದಡಲು ಪ್ರಯತ್ನಿಸುತ್ತಿದೆ. ಅಪ್ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!