ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟವನ್ನು ಗುಜರಾತಿ ಯುವತಿ ರಿಯಾ ಸಿಂಘಾ ಅವರು ಅಲಂಕರಿಸಿದ್ದಾರೆ. ಅವರು ಜಾಗತಿಕ ವಿಶ್ವ ಸುಂದರಿ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಮಿಸ್ ಯೂನಿವರ್ಸ್ ಇಂಡಿಯಾ 2024 ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ಭಾನುವಾರ ರಾಜಸ್ಥಾನದ ಜೈಪುರದಲ್ಲಿ ನಡೆಯಿತು. ಮಿಸ್ ಯೂನಿವರ್ಸ್ ಇಂಡಿಯಾ ಗೆಲುವಿನ ಬಗ್ಗೆ ರಿಯಾ ಖುಷಿ ಹಂಚಿಕೊಂಡಿದ್ದಾರೆ.
ಇಂದು ನಾನು ಮಿಸ್ ಯೂನಿವರ್ಸ್ ಇಂಡಿಯಾ 2024 ಪ್ರಶಸ್ತಿಯನ್ನು ಗೆದ್ದಿದ್ದೇನೆ. ನಾನು ತುಂಬಾ ಕೃತಜ್ಞಳಾಗಿದ್ದೇನೆ. ನಾನು ಈ ಮಟ್ಟಕ್ಕೆ ಬರಲು ಶ್ರಮಿಸಿದ್ದೇನೆ. ನಾನು ಖಂಡಿತವಾಗಿಯೂ ಈ ಕಿರೀಟಕ್ಕೆ ಅರ್ಹಳೆಂದು ಪರಿಗಣಿಸಬಹುದು. ತನ್ನ ಗೆಲುವಿನ ನಂತರ, ಹಿಂದಿನ ವಿಜೇತರಿಂದ ನಾನು ಹೆಚ್ಚು ಸ್ಫೂರ್ತಿ ಪಡೆದಿದ್ದೇನೆ ಎಂದು ಹೇಳಿದ್ದಾರೆ.